ವೀರಾಜಪೇಟೆ, ಜು. ೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಹಾಗೂ ಐ.ಡಿ.ಬಿ.ಐ. ಬ್ಯಾಂಕ್ ಸಹಯೋಗದೊಂದಿಗೆ ಪರಿಸರ ದಿನಾಚರಣೆ ಕಾರ್ಯಕ್ರಮ ನಗರದ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿರುವ ಬಾಲಾಂಜನೇಯ ದೇವಾಲಯದ ಸಭಾಂಗಣದಲ್ಲಿ ನಡೆಯಿತು.
ಪಟ್ಟಣ ಪಂಚಾಯಿತಿ ಸದಸ್ಯ ಪಟ್ಟಡ ರಂಜಿ ಪೂಣಚ್ಚ ಪರಿಸರ ದಿನಾಚರಣೆಯ ಅಂಗವಾಗಿ ವಿವಿಧ ಗಿಡಮೂಲಿಕೆ ಸಸಿಗಳು, ಹಣ್ಣು ಹಂಪಲು ಗಿಡಗಳನ್ನು ಉಚಿತವಾಗಿ ನೀಡಿದರು. ಪರಿಸರ ದಿನಾಚರಣೆಯನ್ನು ದೇಗುಲದ ಆವರಣದಲ್ಲಿ ಫಲ ನೀಡುವ ಸಸಿಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವೀರಾಜಪೇಟೆ ಮತ್ತು ಮಡಿಕೇರಿ ತಾಲೂಕು ಯೋಜನಾಧಿಕಾರಿ ಪದ್ಮಯ್ಯ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶ್ಮಿತಾ ಟಿ.ಆರ್., ಸ್ಥಾಯಿ ಸಮಿತಿ ಅಧ್ಯಕ್ಷೆ ಸುನೀತಾ ಜೂನಾ, ದೇಗುಲದ ಅರ್ಚಕ ಬಾಬಾ ಶಂಕರ್, ವೀರಾಜಪೇಟೆ ವಲಯ ಮೇಲ್ವಿಚಾರಕಿ ರತ್ನ ಮೈಪಾಲ, ಸಿಬ್ಬಂದಿಗಳಾದ ಮೀನಾಕ್ಷಿ, ಪದ್ಮಲತ, ರೇಖಾ, ಮೋಹನ್ ಜೇಮ್ಸ್, ಶೋಭಾ ಹಾಗೂ ಸ್ವಸಹಾಯ ಸಂಘದ ಸದಸ್ಯರು ಹಾಜರಿದ್ದರು.