ವೀರಾಜಪೇಟೆ, ಜು. ೮: ಪ್ರಸ್ತುತ ಸಮಾಜದಲ್ಲಿ ಸ್ವಸಹಾಯ ಸಂಘಗಳಿಗೆ ನೀಡುವ ಯೋಜನೆಗಳಿಂದ ಮಹಿಳೆಯು ಆರ್ಥಿಕವಾಗಿ ಸದೃಢವಾಗಿ ಮುಂದುವರೆಯಲು ಸಾಧ್ಯವಾಗಿದೆ ಎಂದು ವೀರಾಜಪೇಟೆ ತಾಲೂಕು ತಹಶೀಲ್ದಾರ್ ಯೋಗಾನಂದ ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮತ್ತು ಐ.ಡಿ.ಬಿ.ಐ. ಬ್ಯಾಂಕ್‌ಗಳ ಸಹಯೋಗದೊಂದಿಗೆ ದೇವಣಗೇರಿ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸ್ವಸಹಾಯ ಸಂಘಗಳಿAದ ಪಾಲುದಾರ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆಯ ಕೊಡಗು ಜಿಲ್ಲಾ ನಿರ್ದೇಶಕ ಡಾ. ಯೋಗೇಶ್ ಅವರು ಸಂಘದ ಚಟುವಟಿಕೆ ಬಗ್ಗೆ ವಿವರಿಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ. ಶಶಿ ಸುಬ್ರಮಣಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಯೋಜನಾಧಿಕಾರಿ ಪದ್ಮಯ್ಯ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಈ ಸಂದರ್ಭ ಸಂಸ್ಥೆಯ ವತಿಯಿಂದ ವೀಲ್‌ಚೇರ್, ಹಾಲುಗುಂದ ಚೆಂಬೆಬೆಳ್ಳೂರು ಮತ್ತು ದೇವಣಗೇರಿ ಗ್ರಾಮದ ಸ್ವ ಸಹಾಯ ಸಂಘಗಳಿಗೆ ಲಾಭಾಂಶದ ಚೆಕ್ ವಿತರಿಸಲಾಯಿತು.
ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಉಮೇಶ್ ಮತ್ತು ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಹೆಚ್.ಆರ್. ಶಿವಣ್ಣ ಮತ್ತು ಸಿಬ್ಬಂದಿ ನವೀನ್ ಮಾತನಾಡಿದರು. ವಲಯ ಯೋಜನಾಧಿಕಾರಿ ರತ್ನ ಮೈಪಾಲ ನಿರೂಪಿಸಿ, ಯೋಜನಾಧಿಕಾರಿ ಶ್ರೇಯ ವಂದಿಸಿದರು.ನಾಪೋಕ್ಲು: ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕಬ್ಬೆ ಮಹಿಳಾ ಸಮಾಜದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ನಡೆಯಿತು.
ಈ ಸಂರ್ಭದಲ್ಲಿ ಕುಂಜಿಲ-ಕಕ್ಕಬ್ಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಭಾಗಮಂಡಲ ವಲಯದ ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಸಂತೋಷ್, ಕಕ್ಕಬ್ಬೆ ಕೂಟದ ಅಧ್ಯಕ್ಷೆ ಸರೋಜಿನಿ, ಒಕ್ಕೂಟದ ಪದಾಧಿಕಾರಿಗಳಾದ ಸುಧಾ, ವಿದ್ಯಾ, ಕುಂಜಿಲ-ಕಕ್ಕಬ್ಬೆ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಭಾಗ್ಯ, ಸದಸ್ಯರು ಇದ್ದರು.