ಮಡಿಕೇರಿ, ಜು. ೯: ಕೊಡಗು ಜಿಲ್ಲೆಯಲ್ಲಿ ವೈದ್ಯಕೀಯ ಸೌಲಭ್ಯ ವೃದ್ಧಿಗೆ ರೂ. ೨ ಕೋಟಿ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದರು. ಈ ಸಂಬAಧ ಜಿಲ್ಲೆಗೆ ಅಗತ್ಯವಿರುವ ವಿಚಾರದ ಬಗ್ಗೆ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಹಾಗೂ ಸಂಬAಧಪಟ್ಟ ಅಧಿಕಾರಿಗಳು ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಪರಿಸ್ಥಿತಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ. ಅಧಿಕಾರಿಗಳಿಗೆ ಕೋವಿಡ್ ಕರ್ತವ್ಯ ಇರುವ ಹಿನ್ನೆಲೆಯೇ ಇದಕ್ಕೆ ಕಾರಣವಾಗಿದೆ. ಈ ಹಿಂದಿನ ಲೋಕಸಭಾ ಸದಸ್ಯರು ಖರ್ಚು ಮಾಡದ ಅನುದಾನÀ ತನಗೆ ದೊರೆತಿದೆ. ಮೈಸೂರು ಹಾಗೂ ಕೊಡಗು ಕ್ಷೇತ್ರದಿಂದ ಒಟ್ಟು ರೂ. ೨ ಕೋಟಿ ಅನುದಾನ ಮಡಿಕೇರಿ, ಜು. ೯: ಕೊಡಗು ಜಿಲ್ಲೆಯಲ್ಲಿ ವೈದ್ಯಕೀಯ ಸೌಲಭ್ಯ ವೃದ್ಧಿಗೆ ರೂ. ೨ ಕೋಟಿ ಅನುದಾನವನ್ನು ಬಿಡುಗಡೆಗೊಳಿಸಲಾಗುವುದು ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಭರವಸೆ ನೀಡಿದರು. ಈ ಸಂಬAಧ ಜಿಲ್ಲೆಗೆ ಅಗತ್ಯವಿರುವ ವಿಚಾರದ ಬಗ್ಗೆ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಹಾಗೂ ಸಂಬAಧಪಟ್ಟ ಅಧಿಕಾರಿಗಳು ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೋವಿಡ್ ಪರಿಸ್ಥಿತಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗಿಲ್ಲ. ಅಧಿಕಾರಿಗಳಿಗೆ ಕೋವಿಡ್ ಕರ್ತವ್ಯ ಇರುವ ಹಿನ್ನೆಲೆಯೇ ಇದಕ್ಕೆ ಕಾರಣವಾಗಿದೆ. ಈ ಹಿಂದಿನ ಲೋಕಸಭಾ ಸದಸ್ಯರು ಖರ್ಚು ಮಾಡದ ಅನುದಾನÀ ತನಗೆ ದೊರೆತಿದೆ. ಮೈಸೂರು ಹಾಗೂ ಕೊಡಗು ಕ್ಷೇತ್ರದಿಂದ ಒಟ್ಟು ರೂ. ೨ ಕೋಟಿ ಅನುದಾನ ಡಯಾಲಿಸಿಸ್ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ ಇದೆ. ಇರುವ ಸಿಬ್ಬಂದಿಗಳಿಗೆ ವೇತನ ಸಮರ್ಪಕವಾಗಿ ದೊರಕುತ್ತಿಲ್ಲ. ಇದಕ್ಕೆ ಕಾರಣವೇನೆಂದು ಪ್ರಶ್ನಿಸಿ ಕ್ರಮಕ್ಕೆ ನಿರ್ದೇಶನ ನೀಡಿದರು.
(ಮೊದಲ ಪುಟದಿಂದ)
ಗಡಿಯಲ್ಲಿ ಮುನ್ನೆಚ್ಚರಿಕೆ
ಕೊಡಗು-ಕೇರಳ ಗಡಿಯಲ್ಲಿ ಮುನ್ನೆಚ್ಚರಿಕೆ ಅಗತ್ಯವಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆಯಾಗಿ ಅನ್‌ಲಾಕ್‌ನತ್ತ ಮುಖಮಾಡುತ್ತಿದೆ. ಅಧಿಕಾರಿಗಳು ನಿರ್ಲಕ್ಷö್ಯ ವಹಿಸದೆೆ ಕೆಲಸ ಮಾಡಬೇಕೆಂದು ಸಂಸದರು ಸೂಚನೆ ನೀಡಿದರು.
ಕೇರಳದಲ್ಲಿ ನಿತ್ಯ ೧೫ ಸಾವಿರ ಸೋಂಕಿನ ಸಂಖ್ಯೆ ದಾಖಲಾಗುತ್ತಿದೆ. ಇದರಿಂದ ಕೊಡಗಿನ ಗಡಿಯಲ್ಲಿ ಸೂಕ್ತ ಮುಂಜಾಗ್ರತೆ ಅನಿವಾರ್ಯವಾಗಿದೆ. ಯಾವುದೇ ಕಾರಣಕ್ಕೂ ತೊಂದರೆ ಉಂಟಾಗಬಾರದು. ಜಿಲ್ಲೆಗೆ ವ್ಯತಿರಿಕ್ತ ಪರಿಣಾಮ ಬೀರದಂತೆ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ಮಾತನಾಡಿ, ಕುಟ್ಟ, ಮಾಕುಟ್ಟ ಚೆಕ್‌ಪೋಸ್ಟ್ನಲ್ಲಿ ಆರ್.ಎ.ಟಿ. ಹಾಗೂ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಲಾಗುತ್ತದೆ. ನೆಗೆಟಿವ್ ವರದಿ ಅಥವಾ ಲಸಿಕೆ ಪಡೆದ ವರದಿ ಕಡ್ಡಾಯಗೊಳಿಸಲಾಗಿದೆ. ಕಾರ್ಮಿಕರಿಗೆ ಕೊರೊನಾ ಪರೀಕ್ಷೆ ಮಾಡಿ ೧೪ ದಿನ ಕ್ವಾರಂಟೈನ್ ಮಾಡಲಾಗುತ್ತದೆ. ಸೀಲ್ ಮಾಡಲು ಕ್ರಮವಹಿಸಲಾಗುವುದು ಎಂದರು.
ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ
ಶೈಕ್ಷಣಿಕ ಚಟುವಟಿಕೆ ಆರಂಭವಾಗುವ ಹಿನ್ನೆಲೆ ಮೊದಲು ವಿದ್ಯಾರ್ಥಿಗಳಿಗೆ, ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಮೊದಲು ಲಸಿಕೆ ನೀಡುವಂತೆ ಪ್ರತಾಪ್ ಸಿಂಹ ಅವರು ತಿಳಿಸಿದರು.
ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಲಸಿಕೆ ದಿನನಿತ್ಯ ಎಷ್ಟು ಪೂರೈಕೆಯಾಗುತ್ತಿವೆ. ಅದು ಯಾರಿಗೆ ಎಂದು ಮಾಧ್ಯಮಗಳ ಮೂಲಕ ಪ್ರಚಾರ ಮಾಡಬೇಕು. ಹಾಗೆಯೇ ೨ನೇ ಡೋಸ್ ಪಡೆಯುವವರಿಗೆ ಆದ್ಯತೆ ನೀಡಬೇಕೆಂದರು.
ವೈದ್ಯಾಧಿಕಾರಿ ಡಾ.ಗೋಪಿನಾಥ್ ಮಾತನಾಡಿ, ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದೆ. ಆದರೆ, ಲಸಿಕೆಯ ಲಭ್ಯತೆ ಕಡಿಮೆಯಾಗಿರುವುದರಿಂದ (ಮೊದಲ ಪುಟದಿಂದ)
ಗಡಿಯಲ್ಲಿ ಮುನ್ನೆಚ್ಚರಿಕೆ
ಕೊಡಗು-ಕೇರಳ ಗಡಿಯಲ್ಲಿ ಮುನ್ನೆಚ್ಚರಿಕೆ ಅಗತ್ಯವಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆಯಾಗಿ ಅನ್‌ಲಾಕ್‌ನತ್ತ ಮುಖಮಾಡುತ್ತಿದೆ. ಅಧಿಕಾರಿಗಳು ನಿರ್ಲಕ್ಷö್ಯ ವಹಿಸದೆÉ ಕೆಲಸ ಮಾಡಬೇಕೆಂದು ಸಂಸದರು ಸೂಚನೆ ನೀಡಿದರು.
ಕೇರಳದಲ್ಲಿ ನಿತ್ಯ ೧೫ ಸಾವಿರ ಸೋಂಕಿನ ಸಂಖ್ಯೆ ದಾಖಲಾಗುತ್ತಿದೆ. ಇದರಿಂದ ಕೊಡಗಿನ ಗಡಿಯಲ್ಲಿ ಸೂಕ್ತ ಮುಂಜಾಗ್ರತೆ ಅನಿವಾರ್ಯವಾಗಿದೆ. ಯಾವುದೇ ಕಾರಣಕ್ಕೂ ತೊಂದರೆ ಉಂಟಾಗಬಾರದು. ಜಿಲ್ಲೆಗೆ ವ್ಯತಿರಿಕ್ತ ಪರಿಣಾಮ ಬೀರದಂತೆ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮೋಹನ್ ಮಾತನಾಡಿ, ಕುಟ್ಟ, ಮಾಕುಟ್ಟ ಚೆಕ್‌ಪೋಸ್ಟ್ನಲ್ಲಿ ಆರ್.ಎ.ಟಿ. ಹಾಗೂ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಲಾಗುತ್ತದೆ. ನೆಗೆಟಿವ್ ವರದಿ ಅಥವಾ ಲಸಿಕೆ ಪಡೆದ ವರದಿ ಕಡ್ಡಾಯಗೊಳಿಸಲಾಗಿದೆ. ಕಾರ್ಮಿಕರಿಗೆ ಕೊರೊನಾ ಪರೀಕ್ಷೆ ಮಾಡಿ ೧೪ ದಿನ ಕ್ವಾರಂಟೈನ್ ಮಾಡಲಾಗುತ್ತದೆ. ಸೀಲ್ ಮಾಡಲು ಕ್ರಮವಹಿಸಲಾಗುವುದು ಎಂದರು.
ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ
ಶೈಕ್ಷಣಿಕ ಚಟುವಟಿಕೆ ಆರಂಭವಾಗುವ ಹಿನ್ನೆಲೆ ಮೊದಲು ವಿದ್ಯಾರ್ಥಿಗಳಿಗೆ, ಬೋಧಕ, ಬೋಧಕೇತರ ಸಿಬ್ಬಂದಿಗಳಿಗೆ ಮೊದಲು ಲಸಿಕೆ ನೀಡುವಂತೆ ಪ್ರತಾಪ್ ಸಿಂಹ ಅವರು ತಿಳಿಸಿದರು.
ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಲಸಿಕೆ ದಿನನಿತ್ಯ ಎಷ್ಟು ಪೂರೈಕೆಯಾಗುತ್ತಿವೆ. ಅದು ಯಾರಿಗೆ ಎಂದು ಮಾಧ್ಯಮಗಳ ಮೂಲಕ ಪ್ರಚಾರ ಮಾಡಬೇಕು. ಹಾಗೆಯೇ ೨ನೇ ಡೋಸ್ ಪಡೆಯುವವರಿಗೆ ಆದ್ಯತೆ ನೀಡಬೇಕೆಂದರು.
ವೈದ್ಯಾಧಿಕಾರಿ ಡಾ.ಗೋಪಿನಾಥ್ ಮಾತನಾಡಿ, ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದೆ. ಆದರೆ, ಲಸಿಕೆಯ ಲಭ್ಯತೆ ಕಡಿಮೆಯಾಗಿರುವುದರಿಂದ ಅನುದಾನ ಎಷ್ಟು ಬೇಕಿದೆ ಎಂಬುದರ ಬಗ್ಗೆ ಚರ್ಚಿಸುವಂತೆ ಪ್ರತಾಪ್ ಸಿಂಹ ಸಲಹೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಈ ಬಗ್ಗೆ ಪ್ರಸ್ತಾಪಿಸಿ ಸಚಿವ ನಾರಾಯಣ ಗೌಡ ಅವರು ಜಿಲ್ಲೆಗೆ ಆಗಮಿಸಿದ ಸಂದರ್ಭ ರೂ. ೧೦ ಕೋಟಿ ಹಣ ವಿನಿಯೋಗಿಸದೆ ಬಾಕಿ ಇದೆ ಎಂದು ತಿಳಿಸಿದ್ದರು. ಇದು ಗೊಂದಲಕ್ಕೆ ಕಾರಣವಾಗಿದೆ. ಇದರಿಂದ ಜನಪ್ರತಿನಿಧಿಗಳ ಮೇಲೆ ಕೆಟ್ಟ ಅಭಿಪ್ರಾಯ ಮೂಡಿದಂತಾಗಿದೆ ಎಂದು ತಿಳಿಸಿದರು.
ಶಾಸಕ ಕೆ.ಜಿ.ಬೋಪಯ್ಯ ಅನುದಾನ ವಿನಿಯೋಗದ ಬಗ್ಗೆ ಮಾಹಿತಿ ನೀಡಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ನಿರ್ಮಿತಿ ಕೇಂದ್ರದ ಅಧಿಕಾರಿ ಸಚಿನ್ ಮಾತನಾಡಿ, ರೂ. ೬೫ ಲಕ್ಷದ ಕಾಮಗಾರಿಗಳು ಮಾತ್ರ ಬಾಕಿ ಇವೆ ಎಂದರು. ಜಿ.ಪಂ ಕಾರ್ಯಪಾಲಕ ಇಂಜಿನಿಯರ್ ಶ್ರೀಕಂಠಯ್ಯ ಮಾತನಾಡಿ, ೧೮೭ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ದೊರೆಯಲು ಬಾಕಿ ಇದೆ. ೧೮೫ ಕಾಮಗಾರಿ ಪ್ರಗತಿಯಲ್ಲಿದೆ. ಕೆ.ಜಿ.ಬೋಪಯ್ಯ ಅವರ ವ್ಯಾಪ್ತಿಯ ೩೭ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ, ೬೬ ಕಾಮಗಾರಿ ಪ್ರಗತಿ, ರಂಜನ್ ಅವರ ೬೬ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ, ೨೮ ಕಾಮಗಾರಿಗೆ ಪ್ರಗತಿಯಲ್ಲಿದ್ದು, ಇದಕ್ಕೆ ಬಿಲ್ ಆಗಬೇಕಾಗಿದೆ ಎಂದರು.
ಆಡಳಿತಾತ್ಮಕ ಅನುಮೋದನೆ ತಡವಾಗಲು ಕಾರಣವೇನೆಂದು ಶಾಸಕ ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಪ್ರಶ್ನಿಸಿದರು. ಉಪವಿಭಾಗಧಿಕಾರಿ ಈ ಬಗ್ಗೆ ಕ್ರಮಕೈಗೊಳ್ಳಬೇಕು. ಸಭೆಗೆ ಅವರು ಗೈರಾಗಿರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಕಳಪೆ ಕಾಮಗಾರಿ
ಸೋಮವಾರಪೇಟೆ ತಾಲೂಕಿನ ಕೆಲವು ರಸ್ತೆಗಳು ಕಳಪೆಯಿಂದ ಕೂಡಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಅಧಿಕಾರಿಗಳನ್ನು ಸಂಸದರು ಪ್ರಶ್ನಿಸಿದರು.
ಸೋಮವಾರಪೇಟೆ ತಾಲೂಕಿನ ಕೆಲವೆಡೆ ಕಳಪೆ ಕಾಮಗಾರಿ ಬಗ್ಗೆ ತಿಳಿದು ಬಂದಿದ್ದು, ಇದನ್ನು ಪರಿಶೀಲನೆ ನಡೆಸಿ ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಗ್ರಾಮ ಸಡಕ್ ಅಧಿಕಾರಿ ತಿಳಿಸಿದರು.
ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ರಸ್ತೆಗಳ ಬಗ್ಗೆ ‘ಕ್ವಾಲಿಟಿ ಕಂಟ್ರೋಲ್’ ಟೆಸ್ಟ್ ಮಾಡಿಸಬೇಕಾಗಿದೆ. ರಸ್ತೆಗಳು ಈರುಳ್ಳಿ ಸಿಪ್ಪೆಯಂತಿವೆ. ಕಾಮಗಾರಿ ಸಮರ್ಪಕವಾಗಿ ಆಗದಿದ್ದಲ್ಲಿ ಕ್ವಾಲಿಟಿ ಕಂಟ್ರೋಲ್‌ಗೆ ನಾನೇ ಪತ್ರ ಬರೆಯುತ್ತೇನೆ ಎಂದರು.
ಜಲಜೀವನ್ ಮಿಷನ್ ಯೋಜನೆಯಲ್ಲಿ ಜಿಲ್ಲೆಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಿದ ಬಗ್ಗೆ ಸಂಸದರು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಧಿಕಾರಿ ಶ್ರೀಕಂಠಯ್ಯ, ೫೩ ಸಾವಿರ ಗುರಿಯ ಪೈಕಿ ೩೨ ಸಾವಿರ ಕುಟುಂಬಕ್ಕೆ ನಲ್ಲಿ ಸಂಪರ್ಕ ಕಲ್ಪಿಸಿದ್ದೇವೆ ಎಂದು ಉತ್ತರಿಸಿದರು.
ತಡೆಗೋಡೆ - ಪ್ರಸ್ತಾವನೆ ಸಲ್ಲಿಸಿ
ಹೆದ್ದಾರಿ ಬದಿಯಲ್ಲಿ ನಿರ್ಮಾಣವಾಗಬೇಕಾಗಿರುವ ೨೨ ತಡೆಗೋಡೆ, ೨ ಸೇತುವೆ ಕಾಮಗಾರಿಗೆ ಜಿಲ್ಲಾ ಮಟ್ಟದಿಂದ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಪ್ರತಾಪ್ ಸಿಂಹ ನಿರ್ದೇಶನ ನೀಡಿದರು.
ಈಗಾಗಲೇ ಹೆದ್ದಾರಿ ಪ್ರಾಧಿಕಾರದ ಚೀಫ್ ಇಂಜಿನಿಯರ್ ವಿಜಯ್ ಕುಮಾರ್ ಸ್ಥಳ ಪರಿಶೀಲಿಸಿದ್ದಾರೆ. ಕೇಂದ್ರ ಮಟ್ಟದಲ್ಲಿ ತಾನು ಮಾತನಾಡುತ್ತೇನೆ. ತಡಮಾಡದೆ ಪ್ರಸ್ತಾವನೆ ಸಲ್ಲಿಸುವಂತೆ ಹೇಳಿದರು.
ಸಮಿತಿ ಸದಸ್ಯೆ ಯಮುನಾ ಚಂಗಪ್ಪ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕಾಡಾನೆ ಹಾವಳಿ ತಡೆಗೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.
ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ ಮಾತನಾಡಿ, ಮಡಿಕೇರಿ ನಗರದಲ್ಲಿ ಅನಧಿಕೃತ ಕಟ್ಟಡ ನಿರ್ಮಿಸುತ್ತಿರುವ ಮಾಲೀಕರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಯುಕ್ತರಿಗೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ನಾಗರಹೊಳೆ ವಲಯ ಅರಣ್ಯಾಧಿಕಾರಿ ಮಹೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.