ವೀರಾಜಪೇಟೆ, ಜು. ೧೦: ಗಾಂಧಿನಗರ ವಾರ್ಡ್ನ ಅರಣ್ಯ ಭವನದ ಬಳಿ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ವೀರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಭೂಮಿಪೂಜೆ ನೆರವೇರಿಸಿದರು. ಅಂದಾಜು ರೂ.೧೬ ಲಕ್ಷ ವೆಚ್ಚದಲ್ಲಿ ನಬಾರ್ಡ್ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡವನ್ನು ಡಿಸೆಂಬರ್ ಅಂತ್ಯದೊಳಗೆ ಕಾಮಗಾರಿ ನಡೆಸುವಂತೆ ಶಾಸಕರು ಗುತ್ತಿಗೆದಾರರಿಗೆ ಸೂಚಿಸಿದರು. ಗುಣಮಟ್ಟದ ಕಾಮಗಾರಿ ನಡೆಸುವಂತೆ ಲೋಕೋಪಯೋಗಿ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಸುಶ್ಮಿತಾ, ಸ್ಥಾಯಿ ಸಮಿತಿ ಅಧ್ಯಕ್ಷೆ ಸುನೀತಾ, ಸದಸ್ಯರಾದ ಜಲೀಲ್, ಆಶಾ, ಸುಬ್ಬಯ್ಯ, ಅನಿತಾ, ಶಿಶು ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ರಾಜೇಶ್, ಡಿಸಿಸಿ ಬ್ಯಾಂಕ್ ಸದಸ್ಯ ಪಟ್ರಪಂಡ ರಘು ನಾಣಯ್ಯ, ವೀರಾಜಪೇಟೆ ತಾಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಗಿರೀಶ್ ಗಣಪತಿ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮೂವೇರ ಸುರೇಶ್, ಸಹಾಯಕ ಅಭಿಯಂತರ ತಾತಂಡ ಸುಬ್ಬಯ್ಯ ಗುತ್ತಿಗೆದಾರ ತ್ರಿನೇಶ್ ಮತ್ತಿತರರು ಉಪಸ್ಥಿತರಿದ್ದರು.