ಮುಳ್ಳೂರು, ಜು. ೯: ಸಮೀಪದ ಆಲೂರು-ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಗುರುವಾರ ಸರಕಾರಿ ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು. ಐಟಿಐ ಕಾಲೇಜಿನ ೩೧ ವಿದ್ಯಾರ್ಥಿಗಳಿಗೆ ಕೋವಿಶೀಲ್ಡ್ ಲಸಿಕೆಯನ್ನು ಹಾಕಲಾಯಿತು.

ಲಸಿಕೆ ಪಡೆದುಕೊಂಡ ವಿದ್ಯಾರ್ಥಿಗಳಿಗೆ ಲಸಿಕೆ ಮಹತ್ವದ ಬಗ್ಗೆ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಸುಪರ್ಣ ಮಾಹಿತಿ ನೀಡಿದರು. ಈ ಸಂದರ್ಭ ಆಸ್ಪತ್ರೆಯ ಹಿರಿಯ ಆರೋಗ್ಯ ನಿರೀಕ್ಷಕ ಪ್ರವೀಣ್‌ಕುಮಾರ್ ಮಲೇರಿಯಾ ಸಾಂಕ್ರಾಮಿಕ ಕಾಯಿಲೆ ಮತ್ತು ತಡೆಗಟ್ಟುವಿಕೆ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಐಟಿಐ ಕಾಲೇಜು ಪ್ರಾಂಶುಪಾಲ ಶಿವಕುಮಾರ್, ತರಬೇತಿ ಮುಖ್ಯ ಅಧಿಕಾರಿ ಗಂಗಾಧರ್, ಆಸ್ಪತ್ರೆಯ ಕಿರಿಯ ಆರೋಗ್ಯ ಸಹಾಯಕಿಯರು, ಆಸ್ಪತ್ರೆ ಸಿಬ್ಬಂದಿ ಆಶಾಕಾರ್ಯಕರ್ತೆ ಶುಭ ಮುಂತಾದವರು ಹಾಜರಿದ್ದರು.*ಗೋಣಿಕೊಪ್ಪ: ಇಲ್ಲಿನ ಕಾವೇರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಲಸಿಕೆ ಅಭಿಯಾನದಡಿ ಸುಮಾರು ೫೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.

ತಾಲೂಕು ವೈದ್ಯಾಧಿಕಾರಿ ಡಾ. ಯತಿರಾಜ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಲಸಿಕೆ ಪಡೆದುಕೊಂಡರು. ಕಾಲೇಜಿನ ಉಪನ್ಯಾಸಕರು ಕೊರೊನಾ ನಿಯಮ ಪಾಲನೆಯಡಿ ವಿದ್ಯಾರ್ಥಿಗಳು ಅಂತರ ಕಾಯ್ದುಕೊಂಡು ಲಸಿಕೆ ಪಡೆದುಕೊಳ್ಳಲು ಅನುವು ಮಾಡಿಕೊಟ್ಟರು.

ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲ ಕುಸುಮಾಧರ್, ಉಪನ್ಯಾಸಕರಾದ ಡಾ. ರೇವತಿ ಪೂವಯ್ಯ, ಕಾವೇರಪ್ಪ, ಭಾರತಿ, ಕಿರಣ್ ಸೇರಿದಂತೆ ಶುಶ್ರೂಷಕಿಯರು, ಆಶಾ ಕಾರ್ಯಕರ್ತರು ಹಾಜರಿದ್ದರು.ಕರ್ಣಂಗೇರಿ ಮೊಣಕಾಲ್ಮೂರು ಶಾಲೆ: ಕರ್ಣಂಗೇರಿ ಗ್ರಾಮದ ೧೮ ವರ್ಷ ಮೇಲ್ಪಟ್ಟ ಗ್ರಾಮಸ್ಥರಿಗೆ ಮೊಣಕಾಲ್ಮೂರು ಶಾಲೆಯ ಆವರಣದಲ್ಲಿ ಗ್ರಾಮದ ಹಿರಿಯ ಸದಸ್ಯ ಜಾನ್ಸನ್ ಪಿಂಟೋ ಅವರ ನೇತೃತ್ವದಲ್ಲಿ ಕೋವಿಡ್ ಲಸಿಕೆ ಅಭಿಯಾನ ನಡೆಯಿತು. ಈ ಶಿಬಿರದಲ್ಲಿ ಮೊದಲನೆ ಲಸಿಕೆಯನ್ನು ಜಾನ್ಸನ್ ಪಿಂಟೋ ಅವರು ಪಡೆಯುವ ಮೂಲಕ ಚಾಲನೆ ನೀಡಿದರು. ಕರ್ಣಂಗೇರಿ ಗ್ರಾಮದ ಮಹಿಳಾ ಸದಸ್ಯರಾದ ಅನಿತಾ, ಪುಷ್ಪಲತಾ, ಪ್ರಮೀಳಾ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಗಾಯನ, ಗೀತಾ ಕೆ.ಸಿ., ದೇವಕಿ ಎಂ.ವಿ. ಮತ್ತು ಆಶಾ ಕಾರ್ಯಕರ್ತೆ ಅನಿತಾ ರೈ ಮತ್ತು ಮೊಣಕಾಲ್ಮೂರು ಶಾಲೆಯ ಮುಖ್ಯ ಶಿಕ್ಷಕಿ ಸರೋಜಾ ಹಾಜರಿದ್ದರು.

ಕರ್ಣಂಗೇರಿ ಗ್ರಾಮದ ೧೬೫ ಗ್ರಾಮಸ್ಥರು ಲಸಿಕೆ ಪಡೆದುಕೊಂಡರು. ಲಸಿಕೆ ವಿತರಣೆಯ ಮನವಿಗೆ ಸೂಕ್ತವಾಗಿ ಸ್ಪಂದಿಸಿ ಲಸಿಕೆ ಅಲಭ್ಯತೆಯ ನಡುವೆಯೂ ಲಸಿಕೆ ವಿತರಣೆಗೆ ಆರೋಗ್ಯ ಇಲಾಖೆ ಆರ್.ಸಿ.ಹೆಚ್.ಓ. ಡಾ. ಗೋಪಿನಾಥ್ ಅವರು ಸಹಕರಿಸಿದರು. ತಾಲೂಕು ಆರೋಗ್ಯಾಧಿಕಾರಿ ಚೇತನ್ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಕ್ಕಲೇರ ಅಯ್ಯಪ್ಪ ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೆಲ್ವಿ ವಿಜಯಕುಮಾರ್ ಅವರು ಲಸಿಕೆ ಅಭಿಯಾನಕ್ಕೆ ಸ್ಪಂದಿಸಿದರು. ಲಸಿಕೆ ಶಿಬಿರಕ್ಕೆ ಮೂಲಭೂತ ಸೌಕರ್ಯಗಳನ್ನು ಗ್ರಾಮ ಪಂಚಾಯಿತಿಯಿAದ ಒದಗಿಸಲಾಯಿತು.ವೀರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜು: ಕರ್ನಾಟಕ ಸರಕಾರ ಕಾಲೇಜು ಶಿಕ್ಷಣ ಹಾಗೂ ಮಂಗಳೂರು ವಿಶ್ವವಿದ್ಯಾಲಯ, ಕೊಡಗು ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೀರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ಹಾಗೂ ರೆಡ್‌ಕ್ರಾಸ್ ಘಟಕಗಳ ಸಹಯೋಗದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ವೀರಾಜಪೇಟೆ ಸಂತ ಅನ್ನಮ್ಮ ಪದವಿ ಕಾಲೇಜಿನಲ್ಲಿ ನಡೆಯಿತು. ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಮದಲೈಮುತ್ತು ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ವೀರಾಜಪೇಟೆ ಸರ್ವೋದಯ ಬಿ.ಎಡ್. ಕಾಲೇಜಿನ ಪ್ರಾಂಶುಪಾಲೆ ವಾಣಿ, ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ರಾಂಶುಪಾಲ ರೆ.ಫಾ. ರೋನಿ ರವಿಕುಮಾರ್, ಎನ್.ಎಸ್.ಎಸ್. ಅಧಿಕಾರಿ ಅರ್ಜುನ್ ಹೆಚ್.ಆರ್. ರೆಡ್‌ಕ್ರಾಸ್ ಅಧಿಕಾರಿ ಸಂಕೇತ್, ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕರು, ಸರ್ವೋದಯ ಬಿ.ಎಡ್. ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂತ ಅನ್ನಮ್ಮ ಪದವಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸರ್ವೋದಯ ಬಿ.ಎಡ್ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಂಡರು. ಕಾಲೇಜಿನ ಸಿಬ್ಬಂದಿ ವರ್ಗದವರು ಉಪನ್ಯಾಸಕರು ಲಸಿಕೆ ಪಡೆದುಕೊಂಡರು.