ಮಡಿಕೇರಿ, ಜು. ೧೧: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ) ೩೦ ದಿನಗಳ ಆನ್‌ಲೈನ್ ತರಬೇತಿ ನೀಡಲು ನಿರ್ಧರಿಸಿದ್ದು, ಆಸಕ್ತರು ತಾ. ೧೭ ರೊಳಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂ.೦೮೨೧-೨೫೧೫೯೪೪ ನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.