ಭಾಗಮAಡಲ, ಜು. ೧೧: ಭಾಗಮಂಡಲದ ಮೇಲ್ಸೇತುವೆ ಕಾಮಗಾರಿಯಿಂದ ಜನರಿಗೆ ಒಂದಲ್ಲಾ ಒಂದು ಸಮಸ್ಯೆ ಕಾಡುತ್ತಿದ್ದು, ಜನರು ಪರದಾಡುವಂತಾಗಿದೆ. ಅಧಿಕಾರಿಗಳ ನಿರ್ಲಕ್ಷö್ಯದಿಂದಾಗಿ ಜನಸಾಮಾನ್ಯರು ಸಮಸ್ಯೆ ಎದುರಿಸುವಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಮೇಲ್ಸೇತುವೆ ಕಾಮಗಾರಿ ಗುತ್ತಿಗೆದಾರರು ರಸ್ತೆ ಹಾಗೂ ಒಳಚರಂಡಿ ವ್ಯವಸ್ಥೆಯನ್ನು ಮಾಡಬೇಕಿದ್ದು ಒಳಚರಂಡಿ ಅಪೂರ್ಣವಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ. ರಸ್ತೆಯ ಒಂದು ಬದಿ ಒಳಚರಂಡಿ ನೀರನ್ನು ರಸ್ತೆಗೆ ಬಿಡಲಾಗಿದ್ದು, ಸಾರ್ವಜನಿಕರು ನಡೆದಾಡಲು ಪರದಾಡುವಂತಾಗಿದೆ. ರಸ್ತೆಯಲ್ಲಿ ಸುಮಾರು ಅರ್ಧಕಿ.ಮೀ. ದೂರ ಕೆಸರು ನೀರು ತುಂಬಿಕೊAಡು ಮಳೆಯಿಂದಾಗಿ ರಸ್ತೆ ಯಾವುದೆಂದು ಗೊತ್ತಾಗದೆ ಜನಸಾಮಾನ್ಯರು ಪರದಾಡುವಂತಾಗಿದೆ. ವಾಹನ ಚಾಲಕರು ಹಾಗೂ ಪಾದಾಚಾರಿಗಳಿಗೆ ತೊಂದರೆ ಉಂಟಾಗಿದೆ.

ಈ ಸಮಸ್ಯೆ ಬಗ್ಗೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹೊಸೂರು ಸತೀಶ್‌ಕುಮಾರ್ ಮಳೆಗಾಲಕ್ಕೆ ಮುನ್ನ ಒಳಚರಂಡಿ ಕಾಮಗಾರಿ ಮುಗಿಸಿಕೊಡಬೇಕೆಂದು ಕಾರ್ಯಪಾಲಕ ಅಭಿಯಂತರರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಈ ಹಿಂದೆ ಮನವಿ ಸಲ್ಲಿಸಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ. ಎಂದು ಆರೋಪಿಸಿದ್ದು ಇನ್ನಾದರೂ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸುವರೇ? ಎಂದು ಪ್ರಶ್ನಿಸಿದ್ದಾರೆ.