ಮಡಿಕೇರಿ, ಜು. ೧೨: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಿಡಾಕ್ ವತಿಯಿಂದ ಉಚಿತವಾಗಿ ಒಂದು ದಿನದ ಉದ್ಯಮಶೀಲತಾ ಮಾರ್ಗ ದರ್ಶನ ಕಾರ್ಯಕ್ರಮವನ್ನು ಸಿಡಾಕ್ ಜಿಲ್ಲಾ ಕೈಗಾರಿಕಾ ಕೇಂದ್ರ ಮಡಿಕೇರಿ ಯಲ್ಲಿ ಜುಲೈ ತಿಂಗಳ ಮೂರನೇ ವಾರದಲ್ಲಿ ನಡೆಸಲಾಗುತ್ತದೆ ಎಂದು ಜಿಲ್ಲಾ ಕೈಗಾರಿಕ ಕೇಂದ್ರದ ಜಂಟಿ ನಿರ್ದೇಶಕರು ಹೇಳಿದ್ದಾರೆ.

ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸ್ವಯಂ ಉದ್ಯೋಗಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮತ್ತು ಕೈಗಾರಿಕಾ ಮತ್ತು ಸೇವಾ ಚಟುವಟಿಕೆ ಪ್ರಾರಂಭಿಸಲು ಇಚ್ಚಿಸುವ ಸ್ವಉದ್ಯೋಗಾಂಕ್ಷಿಗಳಿಗೆ ತರಬೇತಿಯಲ್ಲಿ ಭಾಗವಹಿಸಲು ಅವಕಾಶವಿದ್ದು, ಹೆಸರು ನೋಂದಾಯಿಸಲು ತಾ. ೧೯ ಕೊನೆಯ ದಿನವಾಗಿದೆ. ತರಬೇತಿಯನ್ನು ಪಡೆಯಲು ಇಚ್ಚಿಸುವವರು ತಮ್ಮ ಇತ್ತೀಚಿನ ೨ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಆಧಾರ್ ಕಾರ್ಡ್ನ ಪ್ರತಿ, ಜಾತಿ ಪ್ರಮಾಣ ಪತ್ರದ ಪ್ರತಿ ಮತ್ತು ಬ್ಯಾಂಕ್ ಪಾಸ್ ಪುಸ್ತಕದ ಪ್ರತಿಯನ್ನು ಸಿಡಾಕ್, ಜಿಲ್ಲಾ ಕೈಗಾರಿಕ ಕೇಂದ್ರ, ಮಡಿಕೇರಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿಯ ದೂ: ೯೨೦೬೮೪೩೫೨೦ನ್ನು ಸಂಪರ್ಕಿಸ ಬಹುದು ಎಂದು ಮಡಿಕೇರಿಯ ಸಿಡಾಕ್ ಜಿಲ್ಲಾ ಕೈಗಾರಿಕ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.