ನಾಪೋಕ್ಲು, ಜು. ೧೨: ಸಮೀಪದ ಚೆಯ್ಯಂಡಾಣೆ, ನರಿಯಂದಡ, ಕರಡ, ಅರಪಟ್ಟು ಗ್ರಾಮಗಳಲ್ಲಿ ನಿರಂತರವಾಗಿ ವಿದ್ಯುತ್ ಸಮಸ್ಯೆ ಎದುರಾಗುತ್ತಿದ್ದು, ಸಂಬAಧಿಸಿದ ಇಲಾಖಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಈ ವ್ಯಾಪ್ತಿಯ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಈ ಬಗ್ಗೆ ‘ಶಕ್ತಿ’ಗೆ ಮಾಹಿತಿ ನೀಡಿದ ಅವರು, ಈ ವ್ಯಾಪ್ತಿಯಲ್ಲಿ ಸಂಜೆಯಾಗುತ್ತಿದ್ದAತೆ ವಿದ್ಯುತ್ ಕೈಕೊಡುತ್ತಿದೆ. ಈ ಬಗ್ಗೆ ವಿದ್ಯುತ್ ಇಲಾಖೆಗೆ ಮನವಿ ಸಲ್ಲಿಸಿದರೂ ಸಮಸ್ಯೆ ಬಗೆಹರಿದಿಲ್ಲ. ಇಲ್ಲಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ನಡೆಯುತ್ತಿದೆ. ಕೊರೊನಾ ಕಾರಣದಿಂದ ಕಂಪನಿ ನೌಕರರು ಮನೆಯಿಂದಲೇ ಕೆಲಸ ನಿರ್ವಹಿಸುತ್ತಾರೆ. ವಿದ್ಯುತ್ ಸಮಸ್ಯೆಯಿಂದ ಅವರೂ ಕೂಡ ಹೆಚ್ಚಿನ ಸಂಕಷ್ಟ ಎದುರಿಸುವಂತಾಗಿದೆ. ಅದರೊಂದಿಗೆ ಈ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ವಿದ್ಯುತ್ ಇರದ ಕಾರಣ ಮನೆಯ ಹೊರಗಡೆ ಏನಾಗಿದೆ ಎಂದು ಅರಿಯಲು ಕೂಡ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಈ ಸಂದರ್ಭದಲ್ಲಿಯೇ ವಿದ್ಯುತ್ ಸಮಸ್ಯೆ ಕಂಡು ಬರುತ್ತಿದ್ದು. ಇನ್ನೂ ಹೆಚ್ಚಿನ ಮಳೆ, ಗಾಳಿ ಆರಂಭಗೊAಡರೆ ನಮ್ಮ ಪರಿಸ್ಥಿತಿ ಏನಾಗಬಹುದು ಎಂದು ಪ್ರಶ್ನಿಸಿರುವ ಅವರು ವಿದ್ಯುತ್ ಇಲಾಖೆಯ ಮೇಲಾಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.