ಕುಶಾಲನಗರ, ಜು. ೧೨: ಕುಶಾಲನಗರ ಮತ್ತು ಸುತ್ತಮುತ್ತ ವ್ಯಾಪ್ತಿಯಲ್ಲಿ ಚಿಕನ್ ಗುನ್ಯಾ ಜ್ವರದ ಪ್ರಮಾಣ ಏರಿಕೆಯಾಗುತ್ತಿದ್ದು, ನೂರಾರು ನಾಗರಿಕರು ರೋಗಕ್ಕೆ ತುತ್ತಾಗುತ್ತಿದ್ದಾರೆ. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೆಚ್ಚಿನ ರೋಗಿಗಳು ಕಂಡುಬರುತ್ತಿದ್ದು ಸ್ಥಳೀಯ ಸರ್ಕಾರಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ತಿಳಿದುಬಂದಿದೆ.

ಕೂಡ್ಲೂರು ಗ್ರಾಮ ವ್ಯಾಪ್ತಿಯಲ್ಲಿ ಈ ರೋಗಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೀಡಿತರಾಗುತ್ತಿದ್ದು, ಗ್ರಾಮೀಣ ಭಾಗದ ಜನತೆ ಮನೆ ಆವರಣ ಸುತ್ತಮುತ್ತ ಸೊಳ್ಳೆಗಳು ಉತ್ಪತ್ತಿಯಾಗದಂತೆ ಎಚ್ಚರ ವಹಿಸಲು ಸ್ಥಳೀಯ ಆಡಳಿತ ಕೋರಿದೆ ಕುಶಾಲನಗರ ಪಟ್ಟಣ ವ್ಯಾಪ್ತಿಯ ಎಲ್ಲಾ ಬಡಾವಣೆ ವ್ಯಾಪ್ತಿಯಲ್ಲಿ ಮನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಫಾಗ್ ಸಿಂಪಡನೆ ಮತ್ತು ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯವರ್ಧನ್ ತಿಳಿಸಿದ್ದಾರೆ.