ಕೂಡಿಗೆ ಜು ೧೨ : ಕೂಡು ಮಂಗಳೂರು ಗ್ರಾಮ ಪಂಚಾಯತಿ ಸಹಯೋಗದಲ್ಲಿ ಕೂಡು ಮಂಗಳೂರು ಸರ್ಕಾರಿ ಪ್ರೌಢಶಾಲೆ ಯಲ್ಲಿ ರಾಷ್ಟಿçÃಯ ಹಸಿರು ಪಡೆಯ ಇಕೋ ಕ್ಲಬ್, ತಾಲೂಕು ಸಾಮಾಜಿಕ ಅರಣ್ಯ ಇಲಾಖೆ ಹಾಗೂ ಎಸ್.ಡಿ. ಎಂ.ಸಿ. ವತಿಯಿಂದ ಹಸಿರೀಕರಣ ಹಾಗೂ ಶಾಲಾವರಣದಲ್ಲಿ ವನ ಮಹೋತ್ಸವ ಸಂವರ್ಧನಾ ಅಭಿಯಾನದಡಿ ಗಿಡಗಳನ್ನು ನೆಡುವ ಮೂಲಕ ವನ ಮಹೋತ್ಸವ ಸಪ್ತಾಹ ಆಚರಿಸಲಾಯಿತು.
ನೇರಳೆ ಗಿಡ ನೆಡುವ ಮೂಲಕ ವನ ಮಹೋತ್ಸವ ಅಭಿಯಾನಕ್ಕೆ ಚಾಲನೆ ನೀಡಿದ ಗ್ರಾಮ ಪಂಚಾಯತಿ ಅಧ್ಯಕ್ಷೆ ಇಂದಿರಾ ರಮೇಶ್ ಮಾತನಾಡಿ, ಶುದ್ಧ ಗಾಳಿ ಹಾಗೂ ಸ್ವಚ್ಛ ಪರಿಸರಕ್ಕಾಗಿ ಶಾಲಾವರಣ ಸೇರಿದಂತೆ ನಮ್ಮ ಸುತ್ತಲಿನ ಪರಿಸರದಲ್ಲಿ ಹೆಚ್ಚು ಗಿಡ ಮರಗಳನ್ನು ಬೆಳೆಸುವ ಮೂಲಕ ಉತ್ತಮ ಪರಿಸರ ನಿರ್ಮಿಸಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದರು. ಪ್ರತಿಯೊಬ್ಬರೂ ಪರಿಸರ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.
‘‘ಪರಿಸರ ಸಂರಕ್ಷಣೆ’’ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ "ಹಸಿರೀಕರಣ ಮತ್ತು ವನ ಮಹೋತ್ಸ ವದ ಮಹತ್ವ ಕುರಿತು ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ಪ್ರತಿಯೊಬ್ಬರೂ ಒಂದೊAದು ಗಿಡ ನೆಡುವ ಮೂಲಕ ಎಲ್ಲರೂ ಪರಿಸರಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಮನವಿ ಮಾಡಿದರು.
ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಎಂ. ಆರ್. ಸಂತೋಷ್ ಮಾತನಾಡಿ, ಗ್ರಾಮ ಪಂಚಾಯತಿ ವತಿಯಿಂದ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ೨ ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವ ಕಾರ್ಯ ಪ್ರಗತಿಯಲ್ಲಿದೆ ಎಂದರು.
ಗ್ರಾಮ ಪಂಚಾಯತಿ ಸದಸ್ಯರಾದ ಶಶಿಕಲಾ ಕೃಷ್ಣಚಾರಿ, ಕುಮಾರ್, ಶಿವಮ್ಮ, ಗ್ರಾಮದ ದೇವಾಲಯ ಸಮಿತಿ ಅಧ್ಯಕ್ಷ ಜವರೇಗೌಡ, ವಿಜ್ಞಾನ ಪರಿಷತ್ತಿನ ಸದಸ್ಯ ಎಂ.ರAಗಸ್ವಾಮಿ, ಎಸ್.ಡಿ.ಎಂ.ಸಿ.ಮಾಜಿ ಸದಸ್ಯ ರಾಜಾಚಾರಿ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನAದ ಪ್ರಕಾಶ್, ಇಕೋ ಕ್ಲಬ್ನ ಉಸ್ತುವಾರಿ ಶಿಕ್ಷಕಿ ಬಿ.ಡಿ. ರಮ್ಯ, ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಡಿ.ರಮೇಶ್, ಅನ್ಸಿಲಾ ರೇಖಾ, ಎಸ್.ಎಂ.ಗೀತಾ, ಪಿ. ಅನಿತಾಕುಮಾರಿ, ಸಿಬ್ಬಂದಿ ಎಂ. ಉಷಾ, ಶಾಲೆಯ ಹಿರಿಯ ವಿದ್ಯಾರ್ಥಿ ಕೆ. ಕೆ. ಚೇತನ್ ಮತ್ತಿತರರು ಇದ್ದರು.