ಎಸ್ಎಸ್ಎಲ್ಸಿ ಪರೀಕ್ಷೆ : ರಿಟ್ ಅರ್ಜಿ ತಿರಸ್ಕೃತ
ಬೆಂಗಳೂರು, ಜು. ೧೨: ಈ ವರ್ಷದ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ತಿರಸ್ಕರಿಸುವ ಮೂಲಕ ರಾಜ್ಯ ಉಚ್ಚ ನ್ಯಾಯಾಲಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪುರಸ್ಕರಿಸಿದ್ದು, ರಾಜ್ಯದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಇಲಾಖೆಗೆ ಭರವಸೆ ಮೂಡಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪರೀಕ್ಷೆ ಸಂಬAಧದಲ್ಲಿ ಈ ವರ್ಷ ಕೈಗೊಂಡಿರುವ ಸರಳೀಕೃತ ಪರೀಕ್ಷಾ ವ್ಯವಸ್ಥೆ ಮತ್ತು ರಾಜ್ಯ ಆರೋಗ್ಯ ಇಲಾಖೆ ರೂಪಿಸಿದ ಎಸ್ಒಪಿ ಪಾಲನೆಗಳಂತಹ ಉಪಕ್ರಮಗಳ ಕುರಿತಂತೆ ಸರ್ಕಾರದ ವೈಜ್ಞಾನಿಕ ಆಲೋಚನೆಗಳನ್ನು ಪುರಸ್ಕರಿಸಿ, ಇದು ಇಡೀ ರಾಷ್ಟçಕ್ಕೆ ಮಾದರಿಯಾದ ಉಪಕ್ರಮವಾಗಿದೆ ಎಂದಿರುವ ಹೈಕೋರ್ಟ್ ಪರೀಕ್ಷೆ ನಡೆಸುವುದನ್ನು ತುಂಬು ಮನಸ್ಸಿನಿಂದ ಶ್ಲಾಘಿಸಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದು ನಮ್ಮ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಹೈಕೋರ್ಟ್ ಸಕಾಲಿಕ ನಿರ್ಧಾರವನ್ನು ಕೈಗೊಂಡಿದ್ದು, ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಸರ್ಕಾರದ ಕ್ರಮಕ್ಕೆ ಬಲ ಬಂದAತಾಗಿದ್ದು, ನಮ್ಮೆಲ್ಲರಲ್ಲೂ ಒಂದು ಭರವಸೆ ಮೂಡಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ವಿಎಸ್ಎಸ್ ಯುನಿಟಿ ನೌಕೆ ಸುರಕ್ಷಿತ ಲ್ಯಾಂಡಿAಗ್
ವಾಷಿAಗ್ಟನ್, ಜು. ೧೨: ಬ್ರಿಟನ್ ಉದ್ಯಮಿ ರಿಚರ್ಡ್ ಬ್ರಾನ್ಸನ್ ಅವರ ಕನಸಿನ ಬಾಹ್ಯಾಕಾಶ ಯೋಜನೆ ಯಶಸ್ವಿಯಾಗಿದ್ದು, ಬಾಹ್ಯಾಕಾಶದತ್ತ ಜಿಗಿದಿದ್ದ ವಿಎಸ್ಎಸ್ ಯುನಿಟಿ ನೌಕೆ ಯಶಸ್ವಿಯಾಗಿ ಧರೆಗೆ ಇಳಿದಿದೆ. ಗಿiಡಿgiಟಿ ಉಚಿಟಚಿಛಿಣiಛಿ ಸಂಸ್ಥೆಯ ಸಂಸ್ಥಾಪಕ ಉದ್ಯಮಿ ರಿಚರ್ಡ್ ಬ್ರಾನ್ಸನ್ ಮತ್ತು ಭಾರತ ಮೂಲದ ಗಗನಯಾನಿ ಸಿರಿಶಾ ಬಾಂದ್ಲಾ ಸೇರಿದಂತೆ ಆರು ಗಗನಯಾನಿಗಳು ಸುರಕ್ಷಿತವಾಗಿ ಇಳಿದಿದ್ದಾರೆ ಎಂದು ತಿಳಿದುಬಂದಿದೆ. ಇಂದು ವರ್ಜಿನ್ ಗ್ಯಾಲಾಕ್ಟಿಕ್ ಸ್ಪೇಸ್ ರಾಕೆಟ್ ವಿಎಸ್ಎಸ್ ಯುನಿಟಿ-೨೨ ಯಶಸ್ವಿಯಾಗಿ ರಾತ್ರಿ ೮ ಗಂಟೆಗೆ ಉಡಾವಣೆಯಾಗಿದ್ದು, ೯.೨೦ರ ಸುಮಾರಿಗೆ ಬಾಹ್ಯಾಕಾಶ ತಲುಪಿದೆ ಎಂದು ವರ್ಜಿನ್ ಗ್ಯಾಲಾಕ್ಟಿಕ್ ಮಾಹಿತಿ ನೀಡಿದೆ ಎನ್ನಲಾಗಿದೆ. ರಿಚರ್ಡ್ ಬ್ರಾನ್ಸನ್ ಅವರೇ ಸಂಸ್ಥಾಪಿಸಿದ ವರ್ಜಿನ್ ಗ್ಯಾಲಕ್ಟಿಕ್ ಸ್ಪೇಸ್ಫ್ಲೆöÊಟ್ ಕಂಪನಿಯೇ ತಯಾರಿಸಿದ ವಿಎಸ್ಎಸ್ ಯುನಿಟಿ ಗಗನ ನೌಕೆಯಲ್ಲಿ ಇಂದು ರಿಚರ್ಡ್ ಬ್ರಾನ್ಸನ್ ಸೇರಿ ಒಟ್ಟು ಆರು ಮಂದಿ ಬಾಹ್ಯಾಕಾಶವನ್ನು ತಲುಪಿದ್ದಾರೆ. ೯೦ ನಿಮಿಷಗಳ ಪ್ರಯಾಣ ಮುಗಿಸಿ ಅಮೆರಿಕದ ನ್ಯೂ ಮೆಕ್ಸಿಕೋ ಸ್ಪೇಸ್ಪಾರ್ಟ್ನಲ್ಲಿ ಲ್ಯಾಂಡ್ ಆಗಿದ್ದು, ವಿಎಂಎಸ್ ಇವ್ನಿಂದ ಮೇಲಕ್ಕೆ ಅಂದ್ರೆ ಭೂಮಿಯ ಪರಿಧಿಯಿಂದ ೫೦ ಸಾವಿರ ಅಡಿಗಳಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಿ ಬಳಿಕ ಸ್ಪೇಸ್ಕ್ರಾಫ್ಟ್ ಸ್ವತಃ ಬಾಹ್ಯಾಕಾಶದತ್ತ ಚಲಿಸುತ್ತದೆ. ಅಂತರಿಕ್ಷದ ಈ ಯಾತ್ರೆ ೧ ಗಂಟೆ ೫ ನಿಮಿಷ ಇರಲಿದೆ. ನಂತರ ವಿಎಸ್ಎಸ್ ಯುನಿಟಿ ವಾಪಸ್ ಸ್ಪೇಸ್ಪಾರ್ಟ್ನಲ್ಲಿ ಲ್ಯಾಂಡ್ ಆಗಿದೆ.
ಸಿಡಿಲು ಬಡಿದು ೨೩ ಮಂದಿ ಸಾವು
ಜೈಪುರ, ಜು. ೧೨: ರಾಜಧಾನಿ ಜೈಪುರದಲ್ಲಿ ೧೨ ಜನರು ಸೇರಿದಂತೆ ರಾಜಸ್ಥಾನದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು ೨೩ ಜನರು ಸಾವನ್ನಪ್ಪಿದ್ದು, ೨೭ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ. ವಿಪತ್ತು ನಿರ್ವಹಣಾ ಮತ್ತು ಪುನರ್ವಸತಿ ಇಲಾಖೆ ಪ್ರಕಾರ, ಜೈಪುರ ಅಲ್ಲದೇ, ಕೊಟಾ, ಜಾಲ್ವಾರ್, ಬಾರನ್, ದೋಲ್ಫುರ್, ಸವಾಯ್ ಮಾಧೋಪುರ ಮತ್ತು ಟೊಂಕ್ ಜಿಲ್ಲೆಗಳಲ್ಲಿ ಸಾವಿನ ಘಟನೆಗಳು ವರದಿಯಾಗಿದೆ. ಜೈಪುರದಲ್ಲಿ ಸಂಭವಿಸಿದ ದೊಡ್ಡ ದುರಂತದಲ್ಲಿ, ಅಂಬರ್ ಕೋಟೆ ಬಳಿಯ ಐಕಾನಿಕ್ ವಾಚ್ಟವರ್ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ೧೨ ಮಂದಿ ಯುವಕರು ಸಿಡಿಲು ಬಡಿದು ಸಾವನ್ನಪ್ಪಿದ್ದರೆ, ೧೧ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಾ. ೧೯ ರಿಂದ ಸಂಸತ್ ಮುಂಗಾರು ಅಧಿವೇಶನ
ನವದೆಹಲಿ, ಜು. ೧೨: ಜುಲೈ ೧೯ ರಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಕೋವಿಡ್ ಸಂಬAಧಿತ ಎಲ್ಲಾ ಶಿಷ್ಟಾಚಾರಗಳನ್ನು ಪಾಲಿಸಲಾಗುವುದು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಸೋಮವಾರ ಹೇಳಿದ್ದಾರೆ. ಅಧಿವೇಶನ ಸಂದರ್ಭದಲ್ಲಿ ಸಂಸತ್ ಆವರಣ ಪ್ರವೇಶಿಸುವ ಮುನ್ನ ಕೋವಿಡ್ ಲಸಿಕೆ ಪಡೆಯದವರು ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಸಂಸತ್ ಕಾಂಪ್ಲೆಕ್ಸ್ನಲ್ಲಿAದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿರ್ಲಾ, ೩೨೩ ಸಂಸದರು ಲಸಿಕೆ ಪಡೆದುಕೊಂಡಿದ್ದಾರೆ. ಕೆಲ ವೈದ್ಯಕೀಯ ಕಾರಣದಿಂದ ೨೩ ಸಂಸದರು ಮೊದಲ ಡೋಸ್ ಲಸಿಕೆ ಪಡೆದುಕೊಂಡಿಲ್ಲ ಎಂದು ತಿಳಿಸಿದರು. ಸಂಸತ್ತಿನ ಉಭಯ ಸದನಗಳ ಕಲಾಪಗಳು ಬೆಳಗ್ಗೆ ೧೧ ಗಂಟೆಗೆ ಆರಂಭವಾಗಲಿವೆ. ಜುಲೈ ೧೯ ರಂದು ಆರಂಭವಾಗುವ ಸಂಸತ್ ಅಧಿವೇಶನ ಆಗಸ್ಟ್ ೧೩ಕ್ಕೆ ಮುಕ್ತಾಯವಾಗಲಿದೆ ಎಂದರು. ಸಾಂಕ್ರಾಮಿಕ ಆರಂಭವಾದಾಗಿನಿAದಲೂ ಮೂರು ಅಧಿವೇಶನಗಳನ್ನು ಮೊಟಕುಗೊಳಿಸಲಾಗಿತ್ತು. ಕಳೆದ ವರ್ಷದ ಚಳಿಗಾಲದ ಅಧಿವೇಶನವನ್ನು ರದ್ದುಗೊಳಿಸಲಾಗಿತ್ತು. ಸಾಮಾನ್ಯವಾಗಿ ಮುಂಗಾರು ಅಧಿವೇಶನ ಜುಲೈನಲ್ಲಿ ಆರಂಭವಾಗಬೇಕಿತ್ತು. ಆದರೆ, ಕೋವಿಡ್ ಸಾಂಕ್ರಾಮಿಕದ ಪರಿಸ್ಥಿತಿಯಿಂದಾಗಿ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಆರಂಭವಾಗಿತ್ತು.
ಮೇಕೆದಾಟು ಅಣೆಕಟ್ಟು ನಿರ್ಮಾಣ : ತ.ನಾಡು ಸರಕಾರ ಆಕ್ಷೇಪ
ಚೆನ್ನೆöÊ, ಜು. ೧೨: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯದ ಎಲ್ಲಾ ಶಾಸಕಾಂಗ ಪಕ್ಷಗಳ ಸಭೆಯಲ್ಲಿ ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಹೊಸ ಅಣೆಕಟ್ಟು ನಿರ್ಮಿಸುವ ಕರ್ನಾಟಕದ ಪ್ರಯತ್ನವನ್ನು ಖಂಡಿಸಿದ್ದು ಇದಕ್ಕೆ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆೆ. ರಾಜ್ಯದ ಜನರ ಒಕ್ಕೂಟದ ವಿರೋಧವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಲು ಸರ್ವಪಕ್ಷಗಳ ನಿಯೋಗ ಶೀಘ್ರದಲ್ಲೇ ನವದೆಹಲಿಗೆ ಭೇಟಿ ನೀಡಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿರುವ ಅರ್ಜಿಗಳು ಸೇರಿದಂತೆ ಎಲ್ಲಾ ಕಾನೂನು ಮತ್ತು ಇತರ ಕ್ರಮಗಳನ್ನು ಮುಂದುವರಿಸಲು ಸಭೆ ನಿರ್ಧರಿಸಿದೆ. ಸಭೆಯಲ್ಲಿ ಅಂಗೀಕರಿಸಿದ ಮೂರು ನಿರ್ಣಯಗಳಲ್ಲಿ ಮೇಕೆದಾಟು ಯೋಜನೆಯು ಒಂದಾಗಿದೆ. ಇದು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸುವ ಪ್ರಯತ್ನ ವಾಗಿದೆ. ಇದು ಭಾರತದ ಸಂವಿಧಾನಕ್ಕೆ ಸವಾಲಾಗಿದೆ ಎಂದು ಹೇಳಿದರು.
ನಟ ದರ್ಶನ್ಗೆ ವಂಚನೆಗೆ ಯತ್ನ : ಮಹಿಳೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ಮೈಸೂರು, ಜು. ೧೨: ನಟ ದರ್ಶನ್ ತೂಗುದೀಪ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್ ಸ್ನೇಹಿತರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಬ್ಯಾಂಕ್ ನಕಲಿ ಮಹಿಳಾ ಅಧಿಕಾರಿ ಸೇರಿ ಮೂವರನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನಟ ದರ್ಶನ್ ಆಸ್ತಿ ಪತ್ರ ಮತ್ತು ಸಹಿಯನ್ನು ನಕಲು ಮಾಡಿ, ಅದರ ಆಧಾರದ ಮೇಲೆ ಬ್ಯಾಂಕಿನಲ್ಲಿ ರೂ.೨೫ ಕೋಟಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿ ಸೃಷ್ಟಿಸಲಾಗಿದೆ. ಪ್ರಕರಣಕ್ಕೆ ಸಂಬAಧಿಸಿ ನಕಲಿ ಬ್ಯಾಂಕ್ ಅಧಿಕಾರಿ ಅರುಣಕುಮಾರಿ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ತೀವ್ರಗೊಳಿಸಿದ್ದಾರೆ. ವಿಚಾರ ತಿಳಿದು ನಟ ದರ್ಶನ್ ಅವರು ಭಾನುವಾರ ತಮ್ಮ ಸ್ನೇಹಿತರಾದ ದೂರುದಾರ ಹರ್ಷ ಮಲೆಂಟಾ, ನಿರ್ಮಾಪಕ ಉಮಾಪತಿ ಹಾಗೂ ಇತರರೊಂದಿಗೆ ಮೈಸೂರಿನ ಎನ್.ಆರ್.ಉಪ ವಿಭಾಗದ ಎಸಿಪಿ ಕಚೇರಿಗೆ ಖುದ್ದು ಹಾಜರಾಗಿದ್ದರು. ಮೂಲಗಳ ಪ್ರಕಾರ ಪೊಲೀಸರು ಅರುಣಕುಮಾರಿ, ಮಧುಕೇಶವ ಹಾಗೂ ನಂದೀಶ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.