ಚೆಯ್ಯಂಡಾಣೆ, ಜು. ೧೨: ಬಿ.ಎಸ್.ಎನ್.ಎಲ್. ನೆಟ್‌ವರ್ಕ್ ಸಮಸ್ಯೆಯಿಂದ ಚೆಯ್ಯಂಡಾಣೆ ವ್ಯಾಪ್ತಿಯ ಜನರು ಸಮಸ್ಯೆ ಅನುಭವಿಸು ತ್ತಿದ್ದು, ಈ ಬಗ್ಗೆ ಸಂಬAಧಪಟ್ಟ ಇಲಾಖೆ ಎಚ್ಚೆತ್ತು ಸಮಸ್ಯೆ ಪರಿಹರಿಸಬೇಕೆಂದು ಜನರು ಆಗ್ರಹಿಸಿದ್ದಾರೆ.

ಇತ್ತೀಚಿಗೆ ಬಿಎಸ್‌ಎನ್‌ಎಲ್ ಸಂಸ್ಥೆ ಕಾರ್ಯವೈಖರಿ ಬದಲಾಗಿದ್ದು, ಜನರ ಸಮಸ್ಯೆಗೆ ಸ್ಪಂದನ ದೊರಕುತ್ತಿಲ್ಲ. ಕೊರೊನಾ ಪರಿಸ್ಥಿತಿಯಿಂದ ಆನ್‌ಲೈನ್ ಕಲಿಕೆ ಹಾಗೂ ವರ್ಕ್ ಫ್ರಂ ಹೋಂ ಮೂಲಕ ಕಾರ್ಯ ನಿರ್ವಹಿಸುವವರಿಗೆ ಸಮಸ್ಯೆಯಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ನೆಟ್‌ವರ್ಕ್ ಸಮಸ್ಯೆಗೆ ಮುಕ್ತಿ ಕಾಣಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.