ವೀರಾಜಪೇಟೆ, ಜು. ೧೨: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೀರಾಜಪೇಟೆ ತೋಮರ ಗ್ರಾಮದಲ್ಲಿ ನಡೆದಿದೆ.
ಕೆದಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ ತೋಮರ ಗ್ರಾಮದ ನಿವಾಸಿ ಎಂ.ಸಿ. ಚಂದ್ರಶೇಖರ್ (೪೩) ಆತ್ಮಹತ್ಯೆಗೆ ಶರಣಾದ ವ್ಯಕ್ತಿ.
ಚಂದ್ರಶೇಖರ್ (ಪುಟ್ಟು) ಬಾಣಸಿಗನಾಗಿ ಕೆಲಸ ಮಾಡುತ್ತಿದ್ದರು. ಕುಡಿತದ ಚಟವಿದ್ದು, ತಾ. ೧೦ ರಂದು ಪೂರ್ವಾಹ್ನ ಮದÀ್ಯದೊಂದಿಗೆ ಕೀಟನಾಶಕ ಬೆರಸಿ ಸೇವಿಸಿದ್ದಾರೆ. ಸ್ಥಳೀಯರು ವೀರಾಜಪೇಟೆ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ವೈದÀ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸು ವಂತೆ ತಿಳಿಸಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಾ. ೧೧ ರಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೃತರ ಪತ್ನಿ ಯಶೋದಾ ನೀಡಿದ ದೂರಿನ ಮೇರೆಗೆ ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
-ಕೆ.ಕೆ.ಎಸ್., ವೀರಾಜಪೇಟೆ