ಸೋಮವಾರಪೇಟೆ, ಜು.೧೨: ಜಿಲ್ಲೆಯಲ್ಲಿ ಕಾರ್ಯಾಚರಿಸುತ್ತಿರುವ ಮೋಬಿಯಸ್ ಫೌಂಡೇಷನ್‌ನಿAದ ಸೋಮವಾರಪೇಟೆ ಹಾಗೂ ಶನಿವಾರಸಂತೆ ಸರ್ಕಾರಿ ಆಸ್ಪತ್ರೆಗಳಿಗೆ ರೂ. ೧೬.೫೦ ಲಕ್ಷ ವೆಚ್ಚದಲ್ಲಿ ೧೫ ಆಕ್ಸಿಜನ್ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಲಾಯಿತು.

ಸೋಮವಾರಪೇಟೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ೧೦ ಹಾಗೂ ಶನಿವಾರಸಂತೆ ಸರ್ಕಾರಿ ಆಸ್ಪತ್ರೆಗೆ ೫ ಸಾಂದ್ರಕಗಳನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರ ಮೂಲಕ ಸಾರ್ವಜನಿಕ ಸೇವೆಗೆ ಒದಗಿಸಲಾಯಿತು.

ಈ ಸಂದರ್ಭ ಮಾತನಾಡಿದ ಶಾಸಕ ರಂಜನ್, ಮೋಬಿಯಸ್ ಫೌಂಡೇಷನ್ ಮೂಲಕ ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿರುವುದು ಶ್ಲಾಘನೀಯ. ಕೊರೊನಾ ೨ನೇ ಅಲೆಯಲ್ಲಿ ಅತೀ ಹೆಚ್ಚು ಸಾವು ನೋವುಗಳು ಸಂಭವಿಸಿದ್ದು, ೩ನೇ ಅಲೆಯ

(ಮೊದಲ ಪುಟದಿಂದ) ಬಗ್ಗೆಯೂ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇಂತಹ ಸನ್ನಿವೇಶದಲ್ಲಿ ಮೋಬಿಯಸ್ ಮೂಲಕ ತಲಾ ರೂ.೧.೧೦ಲಕ್ಷ ವೆಚ್ಚದಂತೆ ೧೫ ಆಮ್ಲಜನಕ ಸಾಂದ್ರಕಗಳನ್ನು ನೀಡಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದರು.

ಕಳೆದ ೨೦೧೮ರಲ್ಲಿ ಸಂಭವಿಸಿದ ಮಹಾಪ್ರಳಯದ ಸಂದರ್ಭವೂ ಸಂಸ್ಥೆಯ ವತಿಯಿಂದ ಪ್ರಪ್ರಥಮವಾಗಿ ಮಾದಾಪುರ ಸರ್ಕಾರಿ ಶಾಲೆಯಲ್ಲಿ ಕಾಳಜಿ ಕೇಂದ್ರ ತೆರೆದು ಸಾವಿರಾರು ಮಂದಿಗೆ ಆಶ್ರಯ ಕಲ್ಪಿಸಲಾಗಿತ್ತು. ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಬಡ ಮಂದಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿದ್ದಾರೆ. ಇಂತಹ ಸಮಾಜಮುಖಿ ಸಂಸ್ಥೆಗಳು ಇನ್ನಷ್ಟು ಬೆಳೆಯಬೇಕು ಎಂದು ರಂಜನ್ ಆಶಿಸಿದರು.

ಮೋಬಿಯಸ್ ಫೌಂಡೇಷನ್‌ನಿAದ ಹೊಸ್ಕೇರಿ ಗ್ರಾಮ ವ್ಯಾಪ್ತಿಯಲ್ಲಿ ಇಂಟರ್‌ನ್ಯಾಷನಲ್ ಸ್ಕೂಲ್ ಸ್ಥಾಪನೆಗೆ ಮುಂದಾಗಿರುವುದು ಶ್ಲಾಘನೀಯ. ಯಾವುದೇ ಪ್ರದೇಶ ಅಭಿವೃದ್ಧಿಯಾಗಬೇಕಾದರೆ ಮೂಲಭೂತ ಸೌಕರ್ಯಗಳೊಂದಿಗೆ ಉತ್ತಮ ಶೈಕ್ಷಣಿಕ ಕೇಂದ್ರಗಳೂ ಅಗತ್ಯ. ವಿದ್ಯೆಯಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಶಾಲೆ ನಿರ್ಮಾಣವಾದರೆ ಸ್ಥಳೀಯವಾಗಿಯೇ ಉತ್ತಮ ವಿದ್ಯಾಭ್ಯಾಸ ಲಭಿಸುವುದರೊಂದಿಗೆ, ಉದ್ಯೋಗ ಸೃಷ್ಟಿಯೂ ಆಗುತ್ತದೆ. ಈ ನಿಟ್ಟಿನಲ್ಲಿ ಎಲ್ಲರೂ ಸಹಕರಿಸಬೇಕೆಂದು ರಂಜನ್ ಅಭಿಪ್ರಾಯಿಸಿದರು.

ಮೋಬಿಯಸ್ ಫೌಂಡೇಷನ್‌ನ ಯೋಜನಾ ಸಂಯೋಜಕ ಮಧು ಬೋಪಣ್ಣ ಮಾತನಾಡಿ, ಸಂಸ್ಥೆಯ ವತಿಯಿಂದ ಈಗಾಗಲೇ ಇಸ್ರೇಲ್‌ನಿಂದ ತರಿಸಲಾದ ೧೫ ಆಮ್ಲಜನಕ ಸಾಂದ್ರಕಗಳನ್ನು ನೀಡಿದ್ದು, ಕುಶಾಲನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೂ ಯೋಜನೆ ಸಿದ್ಧಪಡಿಸಲಾಗಿದೆ ಎಂದರು. ಇದರೊಂದಿಗೆ ಹೊಸ್ಕೇರಿ ಗ್ರಾಮದಲ್ಲಿ ಪರಿಸರ ಸ್ನೇಹಿ ಶಾಲೆ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದರು.

ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವೈದ್ಯರಾದ ಸತೀಶ್‌ಕುಮಾರ್, ತಾ.ಪಂ. ಮಾಜಿ ಉಪಾಧ್ಯಕ್ಷ ಅಭಿಮನ್ಯುಕುಮಾರ್, ಪ್ರಮುಖರಾದ ಎಸ್.ಆರ್. ಸೋಮೇಶ್, ಶರತ್‌ಚಂದ್ರ, ನೇಗಳ್ಳೆ ಜೀವನ್, ಆಸ್ಪತ್ರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶನಿವಾರಸಂತೆ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ಪರಶಿವಮೂರ್ತಿ, ಗ್ರಾ.ಪಂ. ಸದಸ್ಯ ಎಸ್.ಎನ್. ರಘು, ದುಂಡಳ್ಳಿ ಗ್ರಾ.ಪಂ. ಉಪಾಧ್ಯಕ್ಷ ನಿತಿನ್, ವೈದ್ಯರಾದ ಎಂ.ವಿ. ಚಂದನ್, ಯಶ್ವಂತ್ ಸೇರಿದಂತೆ ಸಿಬ್ಬಂದಿಗಳು, ಸ್ಥಳೀಯರು ಭಾಗವಹಿಸಿದ್ದರು.