ಸೋಮವಾರಪೇಟೆ, ಜು.೧೨: ಕೊರೊನಾ ಹಿನ್ನೆಲೆ ಹಲವಷ್ಟು ಮಾರ್ಗಸೂಚಿಗಳನ್ನು ಅಳವಡಿಸಿ ಕೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಸರ್ಕಾರ ಸಿದ್ಧತೆ ಕೈಗೊಂಡಿದ್ದು, ಕೊಡಗಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರುವ ಮೂಲಕ ರಾಜ್ಯದಲ್ಲಿ ಉನ್ನತ ಸ್ಥಾನ ಪಡೆಯಬೇಕು ಎಂದು ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪಬ್ಲಿಕ್ ಟಿ.ವಿ. ಹಾಗೂ ಸಂಸದ ಪ್ರತಾಪ್ ಸಿಂಹ ಅವರ ಸಹಭಾಗಿತ್ವದಲ್ಲಿ, ಶಾಸಕ ಅಪ್ಪಚ್ಚುರಂಜನ್ ಅವರ ನೇತೃತ್ವದಲ್ಲಿ ಶಾಸಕರ ಕಚೇರಿಯಲ್ಲಿ ಆಯೋಜಿಸಿದ್ದ ಸರ್ಕಾರಿ ಶಾಲೆಗಳ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೊರೊನಾ ವೈರಸ್ ಹಿನ್ನೆಲೆ ೧೦ನೇ ತರಗತಿ ಪರೀಕ್ಷೆಯನ್ನು ಹಲವು ಮಾರ್ಪಾಡುಗಳೊಂದಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ನಡೆಸಲಾಗುತ್ತಿದೆ. ಈ ಬಾರಿಯ ಪರೀಕ್ಷೆಯೂ ಸರಳವಾಗಿರಲಿದ್ದು, ಯಾವುದೇ ಭಯಾತಂಕಕ್ಕೆ ಒಳಗಾಗದೇ ಪರೀಕ್ಷೆ ಎದುರಿಸಬೇಕೆಂದು ಸಲಹೆ ನೀಡಿದರು.

ಸೋಮವಾರಪೇಟೆ ತಾಲೂಕಿಗೆ ಸಂಬAಧಿಸಿದAತೆ ೧೧ ಸರ್ಕಾರಿ ಪ್ರೌಢ ಶಾಲೆಗಳ ೧೮೯ ವಿದ್ಯಾರ್ಥಿಗಳಿಗೆ ಉಚಿತವಾಗಿ ಟ್ಯಾಬ್ ವಿತರಿಸ ಲಾಗುತ್ತಿದೆ. ಇದನ್ನು ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕವಾಗಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದ ರಂಜನ್, ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚಿನ ಶುಚಿತ್ವಕ್ಕೆ ಆದ್ಯತೆ ನೀಡಲಾಗುವುದು. ವಿದ್ಯಾರ್ಥಿಗಳಿಗೆ ತಲಾ ೨ ಮಾಸ್ಕ್, ಥರ್ಮಲ್ ಸ್ಕಾö್ಯನಿಂಗ್ ನಡೆಸ ಲಾಗುವುದು. ಕೊಠಡಿಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡ ಲಾಗುವುದು. ಶಿಕ್ಷಣ ಇಲಾಖೆಯೊಂದಿಗೆ ಇತರ ಇಲಾಖಾ ಸಿಬ್ಬಂದಿಗಳನ್ನೂ ಜೋಡಿಸಿಕೊಳ್ಳಲಾಗುವುದು ಎಂದು ರಂಜನ್ ತಿಳಿಸಿದರು.

ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಐಗೂರು, ಮಾದಾಪುರ, ನೇರುಗಳಲೆ ಶಾಲೆಗಳ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಟ್ಯಾಬ್ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.