ಮುಳ್ಳೂರು, ಜು. ೧೨: ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಸ್ಥಳೀಯ ಭಾರತಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೧೮ ವರ್ಷ ಮೇಲ್ಪಟ್ಟ ಕಾಲೇಜಿನ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.

ಸಮುದಾಯ ಆರೋಗ್ಯ ಕೇಂದ್ರದ ವೈದ್ಯೆ ಡಾ.ರಾಜೇಶ್ವರಿ ಮಾತನಾಡಿ-ಸರಕಾರ ೧೮ ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಕೋವಿಡ್ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಕೇಂದ್ರಕ್ಕೆ ಲಭ್ಯವಾಗಿರುವ ೧೮೦ ಕೋವ್ಯಾಕ್ಸಿನ್ ಲಸಿಕೆಯನ್ನು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮೊದಲ ಹಂತದಲ್ಲಿ ನೀಡಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ ಜಗನ್‌ಪಾಲ್, ನಿರ್ದೇಶಕ ಮಹಮ್ಮದ್ ಪಾಷ, ಪ್ರಾಂಶುಪಾಲ ಇ.ಎಂ.ದಯಾನAದ್, ಪ.ಪೂ.ಕಾಲೇಜಿನ ಪ್ರಾಂಶುಪಾಲ ಎಸ್.ಜೆ.ಅಶೋಕ್, ನೋಡೆಲ್ ಅಧಿಕಾರಿ ಎಂ.ಎನ್.ಹರೀಶ್ ಇದ್ದರು ಲಸಿಕೆ ಅಭಿಯಾನ ಕಾರ್ಯದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಡಾ.ಚಂದನ್, ಡಾ.ಯಶ್ವಂತ್, ಹಿರಿಯ ಆರೋಗ್ಯ ಸಹಾಯಕಿ ಸರಸ್ವತಿ, ಕಿರಿಯ ಆರೋಗ್ಯ ಸಹಾಯಕಿ ಸುರಭಿ, ಆಶಾ ಕಾರ್ಯಕರ್ತೆಯರಾದ ಜ್ಯೋತಿ ಲಕ್ಷಿö್ಮ, ಉಷಾ ಜಯೇಶ್, ಅಂಗನವಾಡಿ ಶಿಕ್ಷಕಿ ವೈಶಾಲಿ, ಆಸ್ಪತ್ರೆ ಸಿಬ್ಬಂದಿ ಪಾಲ್ಗೊಂಡಿದ್ದರು.