ಮಡಿಕೇರಿ, ಜು. ೧೨: ಜಿಲ್ಲೆಯಲ್ಲಿ ಸೋಮವಾರ ೮ ಹೊಸ ಕೋವಿಡ್-೧೯ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ. ಆರ್‌ಟಿಪಿಸಿಆರ್ ಲ್ಯಾಬ್ ಸ್ಯಾನಿಟೈಸೇಶನ್ ಸಂಬAಧ ತಾ. ೧೧ ರಂದು ಮುಚ್ಚಲಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ ೨, ಸೋಮವಾರಪೇಟೆ ತಾಲೂಕಿನಲ್ಲಿ ೫, ವೀರಾಜಪೇಟೆ ತಾಲೂಕಿನಲ್ಲಿ ೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೦,೬೫೮ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೦೭ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೯,೬೭೪ ಮಂದಿ ಗುಣಮುಖರಾಗಿದ್ದಾರೆ. ೬೦೨ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೨ ಸಾವು ಉಂಟಾಗಿದೆ. ಒಟ್ಟು ೩೮೨ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೪೨ ಆಗಿವೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೩.೫೩ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.