ಮಡಿಕೇರಿ, ಜು. ೧೩: ತಾ. ೧೯ ಹಾಗೂ ತಾ. ೨೨ ರಂದು ರಾಜ್ಯಾದ್ಯಂತ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನದಂದು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಕ.ರಾ.ರ.ಸಾ.ನಿ. ನಿಗಮದ ಕೇಂದ್ರ ಕಚೇರಿ ಆದೇಶಿಸಿದೆ. ವಿದ್ಯಾರ್ಥಿಗಳು ಪರೀಕ್ಷೆಗಳು ನಡೆಯುವ ಅವಧಿಯಲ್ಲಿ ಸಂಬAಧಿಸಿದ ಪರೀಕ್ಷಾ ಪ್ರವೇಶ ಪತ್ರ ತೋರಿಸಿದರೆ ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಹಾಗೂ ಹಿಂದಿರುಗುವಾಗಲೂ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳ ಪ್ರವೇಶ ಪತ್ರದ ಆಧಾರದ ಮೇಲೆ ಬಸ್ ಪ್ರಯಾಣಿಸುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ಕೇಂದ್ರಗಳಿಗೆ ತೆರಳುವ ವಿದ್ಯಾರ್ಥಿಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸನ್ನು ಹತ್ತಲು / ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಕ್ರಮಕೈಗೊಳ್ಳುವಂತೆ ಬಸ್, ಚಾಲಕರು ಹಾಗೂ ನಿರ್ವಾಹಕರಿಗೆ ಸೂಚಿಸಲಾಗಿದೆ.