ಮಡಿಕೇರಿ, ಜು. ೧೩: ತಾ. ೧೯ ಮತ್ತು ತಾ. ೨೨ ರಂದು ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯ ಕ್ರಮವಹಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷಾ ಸಿದ್ಧತೆ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಎಸ್ಎಸ್ಎಲ್ಸಿ ಪರೀಕ್ಷೆ ಸಂಬAಧಿಸಿದAತೆ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶವಿಲ್ಲದೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅನುಸರಿಸಬೇಕಾದ ಕ್ರಮಗಳು, ಪರೀಕ್ಷಾ ದಿನದಂದು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಪ್ರವೇಶಿಸುವ ಸಂದರ್ಭದಲ್ಲಿ ಥರ್ಮಲ್ ಸ್ಕಾö್ಯನರ್ ಮತ್ತು ಪಲ್ಸ್ ಆಕ್ಷಿಮೀಟರ್ ಮೂಲಕ ಪರೀಕ್ಷೆ ಮಾಡುವುದು, ಸ್ಯಾನಿಟೈಸರ್ ಮತ್ತು ಮಾಸ್ಕ್ ಬಳಸುವುದು, ಈಗಾಗಲೇ ಹೋಂ ಕ್ವಾರಂಟೈನ್ನಲ್ಲಿ ಇರುವ ವಿದ್ಯಾರ್ಥಿಗಳ ಮಾಹಿತಿ ಒದಗಿಸಬೇಕು. ಕೋವಿಡ್ ನಿಯಮ ಚಾಚು ತಪ್ಪದೆ ಪಾಲಿಸುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪ್ರತೀ ತಾಲೂಕಿಗೆ ಆ್ಯಂಬ್ಯುಲೆನ್ಸ್ ಹಾಗೂ ವೈದ್ಯಕೀಯ ತಂಡವನ್ನು ನೇಮಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪೂರ್ವ ಮತ್ತು ಪರೀಕ್ಷಾ ನಂತರ ಸ್ಯಾನಿಟೈಸರ್ ಮಾಡಲು ಸ್ಥಳೀಯ ಸಂಸ್ಥೆಗಳು ಅಗತ್ಯ ಕ್ರಮವಹಿಸುವಂತೆ ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಪರೀಕ್ಷೆಗೆ ಸಂಬAಧಿಸಿದAತೆ ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶ್ರೀಧರನ್ ಅವರು ಮಾಹಿತಿ ನೀಡಿ ಜಿಲ್ಲೆಯಲ್ಲಿ ೬೯೦೬ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ ೩,೪೬೨ ಬಾಲಕರು ಹಾಗೂ ೩,೩೮೪ ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಮಡಿಕೇರಿ ತಾಲೂಕಿನಲ್ಲಿ ೨೦೪೧, ಸೋಮವಾರಪೇಟೆ ತಾಲೂಕಿನಲ್ಲಿ ೨,೭೦೩ ಹಾಗೂ ವೀರಾಜಪೇಟೆ ತಾಲೂಕಿನಲ್ಲಿ ೨,೧೬೨ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ೪೧ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಮಡಿಕೇರಿಯಲ್ಲಿ ೧೩, ಸೋಮವಾರಪೇಟೆ ತಾಲೂಕಿನಲ್ಲಿ ೧೭ ಹಾಗೂ ವೀರಾಜಪೇಟೆ ತಾಲೂಕಿನಲ್ಲಿ ೧೧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ. ೧ ಕೊಠಡಿಯಲ್ಲಿ ೧೨ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಡಿ.ಡಿ.ಪಿ.ಐ. ಅವರು ಮಾಹಿತಿ ನೀಡಿದರು.
ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಿಗೆ ೧೩೫೨ ಮಂದಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ, ಇವರು ಪ್ರಥಮ ಹಂತದ ಲಸಿಕೆ ಪಡೆದಿದ್ದಾರೆ ಎಂದು ಅವರು ವಿವರಿಸಿದರು.
ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮಾಸ್ಕ್ ವಿತರಿಸಲಾಗುತ್ತದೆ ಎಂದು ಅವರು ತಿಳಿಸಿದರು. ಹಾಗೆಯೇ ತಾ. ೧೫ ಮತ್ತು ೧೭ ರಂದು ಎಸ್.ಎಸ್.ಎಲ್.ಸಿ. ಪರೀಕ್ಷಾ ಪೂರ್ವದ ಅಣುಕು ಪರೀಕ್ಷೆ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಸಂಬAಧಿಸಿದAತೆ ಯಾವುದೇ ಸಂಶಯ ಇದ್ದಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲರೂ ಶ್ರದ್ಧೆಯಿಂದ, ಯಾವುದೇ ಗೊಂದಲಗಳಿಗೆ ಅವಕಾಶ ನೀಡದೆ ಕಾರ್ಯ ನಿರ್ವಹಿಸಬೇಕು ಎಂದು ಶ್ರೀಧರನ್ ಅವರು ಕೋರಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಮ್ಮಿ ಸಿಕ್ಕೆ÷್ವರ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಒದಗಿಸ ಲಾಗಿರುವ ೭ ಸಾವಿರ ಮಾಸ್ಕ್ ಅನ್ನು ಜಿಲ್ಲಾಧಿಕಾರಿ ಅವರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ. ಉಪ ಕಾರ್ಯದರ್ಶಿ ಲಕ್ಷಿö್ಮ, ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಕೆ. ಕಾಂತರಾಜು, ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರಿಶೈಲ ಬೀಳಗಿ, ಹೆಚ್.ಕೆ. ಪಾಂಡು, ಗುರುರಾಜ್, ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಕರು, ಮುಖ್ಯೋಪಾಧ್ಯಾಯರು ಇತರರು ಇದ್ದರು.