ಮಡಿಕೇರಿ, ಜು.೧೩: ಕೊಡಗು ಜಿಲ್ಲೆಯಲ್ಲಿ ಕೋವಿಡ್ ೧೯ ನಿಯಂತ್ರಣ ಸಂಬAಧ ಮಡಿಕೇರಿ ತಾಲೂಕಿನ ಗಡಿಭಾಗದಲ್ಲಿ ಹೆಚ್ಚಿನ ಮುಂಜಾಗ್ರತಾ ಕ್ರಮ ವಹಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಶಾಸಕ ಕೆ.ಜಿ. ಬೋಪಯ್ಯ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್-೧೯ ನಿಯಂತ್ರಣ ಹಾಗೂ ನಿರ್ವಹಣೆ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಿಡಿಒಗಳು, ಆಶಾ ಕಾರ್ಯಕರ್ತೆಯರು ಹಾಗೂ ವಿಲೇಜ್ ನರ್ಸ್ ಕೋವಿಡ್ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಶಾಸಕರು, ಕಂದಾಯ ಹಾಗೂ ಪೊಲೀಸ್ ಇಲಾಖೆಯವರು ಮುಂದಿನ ದಿನಗಳಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಮತ್ತಷ್ಟು ಮುತುವರ್ಜಿ ವಹಿಸಬೇಕಿದೆ ಎಂದರು.
ಮಡಿಕೇರಿ ತಾಲೂಕಿನ ಕರಿಕೆ ಮತ್ತು ಸಂಪಾಜೆ ಗೇಟ್ ಬಳಿ ಮತ್ತು ಗಡಿ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ಕೇರಳದಿಂದ ಬರುವ ಜನರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿಯನ್ನು ಹೊಂದಿರಬೇಕು. ಮೂರನೇ ಅಲೆಯ ಮುನ್ಸೂಚನೆ ಗಮನದಲ್ಲಿಟ್ಟುಕೊಂಡು ಕರ್ತವ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷಿö್ಮ ಮಾತನಾಡಿ, ಕೇರಳದಲ್ಲಿ ಕೋವಿಡ್-೧೯ ಸೋಂಕು ಹೆಚ್ಚುತ್ತಿರುವುದರಿಂದ ಕೊಡಗು ಮತ್ತು ಕೇರಳ ಗಡಿಭಾಗಗಳಲ್ಲಿ ಹೆಚ್ಚಿನ ಗಮನಹರಿಸಬೇಕಿದೆ. ಕೇರಳ ಜನರು ಬಂಟ್ವಾಳ ಮೂಲಕ ಮಂಗಳೂರು ಮಾರ್ಗವಾಗಿ ಜಿಲ್ಲೆಗೆ ಬರುವ ಸಾಧ್ಯತೆಗಳು ಅಧಿಕವಾಗಿದ್ದು ಸಂಬAಧಪಟ್ಟ ವಾಹನಗಳನ್ನು ಪರಿಶೀಲಿಸಬೇಕು ಎಂದು ಸಲಹೆ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಮಾತನಾಡಿ ಕೇರಳದಲ್ಲಿ ಝಿಕಾ ವೈರಸ್ ಹೆಚ್ಚುತ್ತಿರುವುದರಿಂದ ಕೇರಳದಿಂದ ಬರುವ ಜನರನ್ನು ಪರೀಕ್ಷೆಗೆ ಒಳಪಡಿಸಿ ೧೪ ದಿನಗಳ ಕಾಲ ಪ್ರತ್ಯೇಕ ವಾಸಕ್ಕೆ ಒಳಪಡಿಸಬೇಕು.
ಕೋವಿಡ್ ಸೋಂಕಿತರ ವರದಿಯನ್ನು ಸಂಗ್ರಹಿಸುವಾಗ ಪ್ರಾಥಮಿಕ ಸಂಪರ್ಕಿತರನ್ನು ಕಡ್ಡಾಯವಾಗಿ ಸ್ವಾಬ್ ಪರೀಕ್ಷೆಗೆ ಒಳಪಡಿಸಬೇಕು ಎಂದರು. ತಾ.ಪಂ.ಇಒ ಶೇಖರ್ ಮಾತನಾಡಿ, ಹಳ್ಳಿಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದಲ್ಲಿ ತಾಲೂಕು ಮಟ್ಟದ ಆರೋಗ್ಯ ಅಧಿಕಾರಿಗಳ ಗಮನಕ್ಕೆ ತಂದು ಮೊಬೈಲ್ ವಾಹನದ ಮೂಲಕ ಪರೀಕ್ಷೆಗೆ ಒಳಪಡಿಸಬೇಕು ಎಂದು ತಿಳಿಸಿದರು.
ಬಳಿಕ ಪ್ರಾಕೃತಿಕ ವಿಕೋಪ ನಿರ್ವಹಿಸುವಲ್ಲಿ ಇದುವರೆಗೆ ಕೈಗೊಳ್ಳಲಾಗಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಶಾಸಕರು ತುರ್ತು ಪರಿಸ್ಥಿತಿಯಲ್ಲಿ ತಾಲೂಕಿನ ಜನರ ಸಹಾಯಕ್ಕೆ ಅಧಿಕಾರಿಗಳು ಸದಾ ಸಿದ್ಧವಿರಬೇಕು ಎಂದರು. ಭಾಗಮಂಡಲದಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಕಾಶಿಮಠ ಹಾಗೂ ಕೆವಿಜಿ ಕಾಲೇಜಿನಲ್ಲಿ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಶಾಸಕರು ಹೇಳಿದರು.
ತಾ.ಪಂ.ಇಒ ಶೇಖರ್ ಮಾಹಿತಿ ನೀಡಿ ೨೬ ಗ್ರಾಮ ಪಂಚಾಯಿತಿಗಳ ಪೈಕಿ ೫೬ ಭೂಕುಸಿತ ಮತ್ತು ಪ್ರಾಕೃತಿ ವಿಕೋಪದ ಪ್ರದೇಶಗಳನ್ನು ಗುರುತಿಸಲಾಗಿದ್ದು, ಆಯಾಯ ಪ್ರದೇಶದ ಸುತ್ತಮುತ್ತಲು ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸ್ಥಾಪಿಸಲಾಗಿರುವ ಕಾಳಜಿ ಕೇಂದ್ರಗಳು ಮತ್ತು ಪ್ರದೇಶಗಳನ್ನು ನೋಡೆಲ್ ಅಧಿಕಾರಿಗಳು ಪರಿಶೀಲಿಸಿದ್ದು, ಮುಂಜಾಗ್ರತಾ ಕ್ರಮದ ಬಗ್ಗೆ ಜನರಿಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಗ್ರಾಮ ಪಂಚಾಯಿತಿವಾರು ಪ್ರಾಕೃತಿಕ ವಿಕೋಪಕ್ಕೆ ಸಂಬAಧಿಸಿದAತೆ ಕಾರ್ಯನಿರ್ವಹಿಸಲು ಸ್ವಯಂಘೋಷಿತ ಕಾರ್ಯಕರ್ತರಿಗೆ ವಿಶೇಷ ತರಬೇತಿಯನ್ನು ನೀಡಲಾಗುವುದು. ಅದಕ್ಕಾಗಿ ೫೦ ಸಾವಿರ ರೂ ಬಿಡುಗಡೆ ಮಾಡಲಾಗಿದೆ. ಆದ್ದರಿಂದ ತುರ್ತು ನಿರ್ವಹಣೆಗೆ ಸಂಬAಧಿಸಿದ ವುಡ್ ಕಟರ್, ರೋಪ್, ಲೈಫ್ ಜಾಕೆಟ್ ಮತ್ತು ಕಾಳಜಿ ಕೇಂದ್ರಗಳಲ್ಲಿ ಸಿಲಿಂಡರ್ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಅವರು ಹೇಳಿದರು. ಸಭೆಯಲ್ಲಿ ತಹಶೀಲ್ದಾರ್ ಮಹೇಶ್, ತಾಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.