ಕೂಡಿಗೆ, ಜು. ೧೩: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರದಲ್ಲಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದಿದೆ.

ಗ್ರಾ.ಪಂ. ಮಾಜಿ ಸದಸ್ಯೆ, ಸುಂದರನಗರ ನಿವಾಸಿ ಜಯಮ್ಮ ಅವರ ಮನೆಯ ಗೋಡೆ ಒಂದು ಭಾಗ ಕುಸಿದಿದ್ದು, ಅದೃಷ್ಟವಶಾತ್ ಗೋಡೆ ಬಳಿ ಯಾರೂ ಇಲ್ಲದ ಕಾರಣ ಮನೆಯವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕೂಡಿಗೆ ಗ್ರಾಮ ಲೆಕ್ಕಾಧಿಕಾರಿ ಗುರುದರ್ಶನ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ಬಿ. ಷಂಶುದ್ದೀನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಬAಧಪಟ್ಟ ಇಲಾಖೆಯಿಂದ ಪರಿಹಾರವನ್ನು ನೀಡುವ ಭರವಸೆಯನ್ನು ನೀಡಿದ್ದಾರೆ.