ಮಡಿಕೇರಿ, ಜು.೧೩: ಜಿಲ್ಲೆಯಲ್ಲಿ ಮಂಗಳವಾರ ೪೬ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೨೫ ಆರ್‌ಟಿಪಿಸಿಆರ್ ಮತ್ತು ೨೧ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ ೧೦, ಸೋಮವಾರಪೇಟೆ ತಾಲೂಕಿನಲ್ಲಿ ೧೫, ವೀರಾಜಪೇಟೆ ತಾಲೂಕಿನಲ್ಲಿ ೨೧ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೦,೭೦೪ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೧೦ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೯,೭೮೪ ಮಂದಿ ಗುಣಮುಖರಾಗಿದ್ದಾರೆ. ೫೩೮ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ. ಒಟ್ಟು ೩೮೨ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೧೨೫ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೧.೬೨ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.