ಮುಖ್ಯಮಂತ್ರಿಗಳೊAದಿಗೆ ಮೋದಿ ಸಂವಾದ

ನವದೆಹಲಿ, ಜು. ೧೩: ಪ್ರಧಾನಿ ನರೇಂದ್ರ ಮೋದಿ ತಾ. ೧೬ ರಂದು ಆರು ರಾಜ್ಯಗಳ ಮುಖ್ಯಮಂತ್ರಿಗಳೊAದಿಗೆ ಕೋವಿಡ್ ಸಭೆ ನಡೆಸಲಿದ್ದಾರೆ. ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಒಡಿಶಾ, ಮಹಾರಾಷ್ಟç ಮತ್ತು ಕೇರಳ ಮುಖ್ಯಮಂತ್ರಿಗಳೊAದಿಗೆ ಪ್ರಧಾನಿ ಸಂವಾದ ನಡೆಸಲಿದ್ದು, ಕೋವಿಡ್-೧೯ ಪರಿಸ್ಥಿತಿ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಈ ರಾಜ್ಯಗಳಲ್ಲಿನ ಹಲವು ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿನ ಸಂಖ್ಯೆಯು ಹೆಚ್ಚಳ ಕಂಡಿದೆ ಅಥವಾ ಸಾಮಾನ್ಯವಾಗಿ ಇತರ ರಾಜ್ಯಗಳಲ್ಲಿ ಕಂಡುಬರುವAತೆ ಸೋಂಕಿನ ಸಂಖ್ಯೆ ಈ ರಾಜ್ಯಗಳಲ್ಲಿ ಇಳಿಕೆಯಾಗಿಲ್ಲ. ಇಂದು ಈಶಾನ್ಯ ರಾಜ್ಯಗಳ ಎಂಟು ಮುಖ್ಯಮಂತ್ರಿಗಳೊAದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಪ್ರಧಾನಿ, ಸಾಂಕ್ರಾಮಿಕವನ್ನು ಹೋಗಲಾಡಿಸುವವರೆಗೂ ಲಸಿಕೆ ಅಭಿಯಾನದ ಅಗತ್ಯವಿದೆ ಎಂದರು. ಮಾಸ್ಕ್ ಧರಿಸದೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ದೊಡ್ಡ ಜನಸಮೂಹವು ಗಿರಿಧಾಮಗಳು ಮತ್ತು ಮಾರುಕಟ್ಟೆ ಪ್ರದೇಶಗಳಿಗೆ ಬರುತ್ತಿರುವುದು ಆತಂಕದ ವಿಷಯವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೆಟ್‌ವರ್ಕ್ ಸಮಸ್ಯೆ ಪರಿಹಾರಕ್ಕೆ ಕ್ರಮ-ಸಚಿವ ಸುರೇಶ್‌ಕುಮಾರ್

ಬೆಂಗಳೂರು, ಜು. ೧೩: ಬದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್‌ವರ್ಕ್ ಸಮಸ್ಯೆಯನ್ನು ಪರಿಹರಿಸುವ ಸಂಬAಧದಲ್ಲಿ ಸೋಮವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ರಾಜ್ಯದ ಮುಖ್ಯಕಾರ್ಯದರ್ಶಿಯವರ ಜೊತೆ ಸುದೀರ್ಘವಾಗಿ ಚರ್ಚಿಸಿದರು. ಈಗಾಗಲೇ ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವರೂ ಆದ ಉಪಮುಖ್ಯಮಂತ್ರಿ ಡಾ. ಅಶ್ವತ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್‌ವರ್ಕ್ ಪೂರೈಕೆದಾರ ಕಂಪೆನಿಗಳೊAದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣ ರೆಡ್ಡಿ ಅವರು ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆAದು ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಯವರು ಸಚಿವರ ಗಮನಕ್ಕೆ ತಂದಿದ್ದಾರೆ. ಪ್ರಸ್ತುತ ಮಳೆಗಾಲವಾದ್ದರಿಂದ ರಾಜ್ಯದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆಯಿಂದಾಗಿ ಮಕ್ಕಳ ಪರ್ಯಾಯ ಬೋಧನಾ ಕ್ರಮಗಳಾದ ಆನ್‌ಲೈನ್ ಬೋಧನಾ ಕ್ರಮ ಇಲ್ಲವೇ ದೂರದರ್ಶನ ಚಂದನಾ ಪಾಠಗಳಿಗೆ ತೊಂದರೆಯಾಗಿರುವುದರಿAದ ಈ ಕುರಿತು ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟವನ್ನು ಕಾಪಾಡಬೇಕಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ವ್ಯಾಪಕ ಮಳೆ

ಬೆಂಗಳೂರು, ಜು. ೧೩: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ-ಒಳನಾಡು ಮತ್ತು ದಕ್ಷಿಣ ಒಳನಾಡಿನ ಅನೇಕ ಕಡೆ ತಾ. ೧೬ ರವರೆಗೂ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಪ್ರದೇಶದಲ್ಲಿ ಭಾನುವಾರದಿಂದಲೆ ಮಳೆಯಾಗುತ್ತಿದ್ದು ಇದರಿಂದ ವ್ಯವಸಾಯಕ್ಕೆ ಭೂಮಿ ಹದ ಮಾಡಿಕೊಂಡು ಮಳೆಗಾಗಿಯೇ ಕಾಯುತ್ತಿದ್ದ, ರೈತಾಪಿ ಸಮುದಾಯಕ್ಕೆ ನೆಮ್ಮದಿ ದೊರಕಿದಂತಾಗಿದೆ. ಈ ಬಾರಿ ದೇಶದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ರಾಜ್ಯದಲ್ಲಿ ಅಪರಾಧ ಸ್ಥಳ ಪರಿಶೀಲನಾಧಿಕಾರಿ ಹುದ್ದೆ ಸೃಷ್ಟಿ

ಬೆಂಗಳೂರು, ಜು. ೧೩: ರಾಜ್ಯದಲ್ಲೇ ಮೊಟ್ಟಮೊದಲ ಬಾರಿಗೆ ವಿದೇಶಗಳಲ್ಲಿ ಇರುವಂತೆ ಅಪರಾಧ ಸ್ಥಳ ಪರಿಶೀಲನಾಧಿಕಾರಿ ಎಂಬ ಹೊಸ ಹುದ್ದೆಗಳನ್ನು ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೃಷ್ಟಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅಪರಾಧ ನಡೆದ ಸ್ಥಳವನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅಲ್ಲಿ ಎಲ್ಲ ರೀತಿಯ ಸಾಕ್ಷ್ಯವನ್ನು ಸಂಗ್ರಹಿಸಿ ಅಪರಾಧಿಯನ್ನು ಪತ್ತೆ ಮಾಡುವಲ್ಲಿ ‘ಅಪರಾಧ ಸ್ಥಳ ಪರಿಶೀಲನಾಧಿಕಾರಿ’ (sಛಿeಟಿe oಜಿ ಛಿಡಿime oಜಿಜಿiಛಿeಡಿ) ಪರಿಣಿತಿ ಹೊಂದಿರುತ್ತಾರೆ. ಮೊದಲ ಹಂತದಲ್ಲಿ ೨೦೬ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದರು. ಈವರೆಗೆ ಸಾಕ್ಷö್ಯ ಸಂಗ್ರಹಿಸುವ ಕೆಲಸವನ್ನು ಸ್ಥಳೀಯ ಅಧಿಕಾರಿಗಳೇ ಮಾಡುತ್ತಿದ್ದರು. ಗಂಭೀರ ಸ್ವರೂಪದ ಅಪರಾಧಗಳಲ್ಲಿ ಇನ್ನು ಮುಂದೆ ಈ ತಂಡವೇ ಅಪರಾಧ ಕೃತ್ಯ ನಡೆದ ಸ್ಥಳಗಳಿಗೆ ಮೊದಲು ಭೇಟಿ ನೀಡಲಿದೆ. ಅಲ್ಲಿನ ಎಲ್ಲ ಸಾಕ್ಷಾಧಾರಗಳ ಸಂರಕ್ಷಣೆ, ಅವುಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಸುರಕ್ಷಿತವಾಗಿ ಕಳುಹಿಸಿಕೊಡುವುದು, ತನಿಖಾಧಿಕಾರಿಗೆ ಆ ಸಾಕ್ಷಾಧಾರಗಳನ್ನು ಒದಗಿಸುವುದು ಸೇರಿದಂತೆ ಇತರ ಅವಶ್ಯ ಕರ್ತವ್ಯಗಳನ್ನು ಮಾಡುತ್ತಾ ಅಪರಾಧಿಗಳನ್ನು ಅತ್ಯಂತ ಶೀಘ್ರದಲ್ಲಿ ಪತ್ತೆ ಮಾಡಲು ಮೂಲಭೂತವಾಗಿ ಬೇಕಾಗುವ ಎಲ್ಲ ಕೆಲಸ ಕಾರ್ಯಗಳನ್ನು ಈ ಅಧಿಕಾರಿಗಳು ಮಾಡುತ್ತಾರೆ ಎಂದು ವಿವರಿಸಿದರು.

ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ

ಮAಡ್ಯ, ಜು. ೧೩: ಕೆ.ಆರ್.ಎಸ್. ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಪಾಂಡವಪುರ ತಾಲೂಕು ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ಹೇಳಿದರು. ಅಕ್ರಮ ಗಣಿಗಾರಿಕೆ ಹಾಗೂ ಕೆ.ಆರ್.ಎಸ್. ಸುರಕ್ಷತೆ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಿಗಾರಿಕೆ ಸಂಪೂರ್ಣ ನಿಷೇಧದ ಬಗ್ಗೆ ಮುಖ್ಯಮಂತ್ರಿ ಹಾಗೂ ಗಣಿ ಸಚಿವರೊಂದಿಗೆ ಸಮಾಲೋಚಿಸಲಾಗುವುದು ಎಂದು ತಿಳಿಸಿದ್ದಾರೆ.

ಅಕ್ರಮ ಚಿನ್ನ ಆಮದು ದಂಧೆ ಬೇಧಿಸಿದ ಡಿಆರ್‌ಐ

ಬೆಂಗಳೂರು, ಜು. ೧೩: ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿ.ಆರ್.ಐ.) ಮುಂಬೈ ಮೂಲದ ಸಂಸ್ಥೆಯೊAದರ ಸುಮಾರು ರೂ. ೩೩೮ ಕೋಟಿಗಳ ಬೃಹತ್ ತೆರಿಗೆ ವಂಚನೆ ದಂಧೆಯನ್ನು ಪತ್ತೆ ಮಾಡಿದೆ. ಆರೋಪಿತ ಸಂಸ್ಥೆಯು ಕಳೆದ ಮೂರು ವರ್ಷಗಳಲ್ಲಿ ರೂ. ೧,೦೦೦ ಕೋಟಿಗಿಂತಲೂ ಹೆಚ್ಚು ಮೌಲ್ಯದ ಸುಮಾರು ೨,೨೦೦ ಕೆ.ಜಿ. ಚಿನ್ನವನ್ನು ಸ್ಥಳೀಯ ಮಾರುಕಟ್ಟೆಗೆ ತಂದು ಅಡ್ವಾನ್ಸ್ ಆಥರೈಜೇಶನ್ (ಎಎ) ಯೋಜನೆಯನ್ನು ವಂಚನೆಯಿAದ ಬಳಸಿಕೊಂಡಿದೆ ಎಂದು ಅಧಿಕೃತ ಮೂಲವೊಂದು ತಿಳಿಸಿದೆ. ಕಸ್ಟಮ್ಸ್ ಕಾಯ್ದೆಯಡಿ ತಾ. ೧೦ ರಂದು ಇಬ್ಬರು ಆರೋಪಿಗಳನ್ನು ಡಿಆರ್‌ಐ ಬಂಧಿಸಿತ್ತು. ಅವರನ್ನು ತಾ. ೨೧ ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಕೇರಳದಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಜಿಕಾ ವೈರಸ್ ದೃಢ

ತಿರುವನಂತಪುರA, ಜು. ೧೩: ಕೇರಳದ ರಾಜಧಾನಿ ತಿರುವನಂತಪುರAನಲ್ಲಿ ಇಬ್ಬರು ವ್ಯಕ್ತಿಗಳಲ್ಲಿ ಜಿಕಾ ವೈರಸ್ ಮಂಗಳವಾರ ದೃಢಪಟ್ಟಿದೆ. ತಿರುವನಂತಪುರAನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಹೊಸದಾಗಿ ಪರಿಚಯಿಸಲಾದ ಪರೀಕ್ಷಾ ಸೌಲಭ್ಯವನ್ನು ಬಳಸಿಕೊಂಡು ಪೂಂಟುರಾದ ೩೫ ವರ್ಷದ ವ್ಯಕ್ತಿಯಲ್ಲಿ ಸೋಮವಾರ ಜಿಕಾ ವೈರಸ್ ಪತ್ತೆಯಾಗಿದೆ. ಇದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಪತ್ತೆಯಾಗಿರುವ ಎರಡನೇ ಕೇಸ್ ಆಗಿದೆ. ತಿರುವನಂತಪುರAನಿAದಲೇ ಎಲ್ಲಾ ೨೧ ಜಿಕಾ ಕೇಸ್‌ಗಳು ವರದಿಯಾಗಿವೆ.

ಯಶ್ ಪಾಲ್ ಶರ್ಮಾ ನಿಧನ

ನವದೆಹಲಿ, ಜು. ೧೩: ಮಾಜಿ ಕ್ರಿಕೆಟಿಗ ಮತ್ತು ೧೯೮೩ರ ವಿಶ್ವ ಕಪ್ ವಿಜೇತ ತಂಡದ ಸದಸ್ಯರಾಗಿದ್ದ ಯಶ್ ಪಾಲ್ ಶರ್ಮಾ ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ ೬೬ ವರ್ಷ ವಯಸ್ಸಾಗಿತ್ತು. ೭೦ ಹಾಗೂ ೮೦ರ ದಶಕದಲ್ಲಿ ಕ್ರಿಕೆಟ್ ವೃತ್ತಿಜೀವನದಲ್ಲಿ ಮಿಂಚಿದ್ದ ಮಾಜಿ ಪಂಜಾಬ್ ಆಟಗಾರ, ಆಗಸ್ಟ್ ೧೧, ೧೯೫೪ರಲ್ಲಿ ಲೂದಿಯಾನದಲ್ಲಿ ಜನಿಸಿದ್ದರು. ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಆಟಗಾರರಾಗಿದ್ದ ಯಶ್ ಪಾಲ್ ಶರ್ಮಾ, ಭಾರತದ ಪರ ೩೭ ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ೧೯೭೯ರಲ್ಲಿ ಇಂಗ್ಲೆAಡ್ ವಿರುದ್ಧ ಚೊಚ್ಚಲ ಪಂದ್ಯವನ್ನಾಡಿದ ಅವರು, ಎರಡು ಶತಕಗಳೊಂದಿಗೆ ೧೬೦೬ ರನ್‌ಗಳಿಸಿದ್ದರು. ೯ ಅರ್ಧ ಶತಕಗಳೊಂದಿಗೆ ೩೩ಕ್ಕಿಂತ ಹೆಚ್ಚು ಸರಾಸರಿ ಅವರ ಹೆಸರಿನಲ್ಲಿದೆ.