ಮಡಿಕೇರಿ, ಜು. ೧೩: ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವಿಭಾಗದಲ್ಲಿನ ಉತ್ತಮ ಕಾರ್ಯನಿರ್ವಹಣೆಗಾಗಿ ಜಿಲ್ಲೆಯವರಾದ ಇಲಾಖೆಯಲ್ಲಿ ಸಹಾಯಕ ಠಾಣಾ ಅಧಿಕಾರಿಯಾಗಿದ್ದ ಚೌರೀರ ಎಂ. ಭೀಮಯ್ಯ ಅವರಿಗೆ ಮುಖ್ಯಮಂತ್ರಿಗಳ ಪದಕ ಲಭಿಸಿದೆ.

ಇಂದು ಬೆಂಗಳೂರಿನಲ್ಲಿ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಶಸ್ತಿ ವಿತರಿಸಿದರು. ಭೀಮಯ್ಯ ಅವರು ಮೇ ೩೧ ರಂದು ನಿವೃತ್ತರಾಗಿದ್ದು, ಕೋವಿಡ್ ಕಾರಣದಿಂದಾಗಿ ಪ್ರಶಸ್ತಿ ವಿತರಣಾ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು. ಇವರು ಮೂಲತಃ ಹೊದವಾಡ ಗ್ರಾಮದವರಾಗಿದ್ದು, ಪ್ರಸ್ತುತ ಕುಶಾಲನಗರದಲ್ಲಿ ನೆಲೆಸಿದ್ದಾರೆ.