ವೀರಾಜಪೇಟೆ, ಜು. ೧೩: ಆಗಸ್ಟ್ ೧೪ ರಂದು ನಡೆಯಲಿರುವ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿರುವಂತ ವ್ಯಾಜ್ಯ ಪೂರ್ವಕವಾದ ಎಲ್ಲಾ ಪ್ರಕರಣಗಳನ್ನು ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸುವಂತೆ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಲೋಕ ಅದಾಲತ್‌ನ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಯಿತು.
ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಜಿ. ಲೋಕೇಶ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಬಾಕಿ ಇರುವ ಇತ್ಯರ್ಥಪೂರ್ವ ಪ್ರಕರಣಕ್ಕೆ ಸಂಬAಧಿಸಿದAತೆ ರಾಜಿ ಸಂದಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಕಕ್ಷಿದಾರರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಪೂರ್ವಭಾವಿ ಸಭೆಯಲ್ಲಿ ೨ನೇ ಅಪರ ಜಿಲ್ಲಾ ಸತ್ರ ನ್ಯಾಯಾಧೀಶ ಎಸ್.ಆರ್. ಶಿವಪುತ್ರ ದಿಂಡಲ್ ಕೊಪ್ಪ, ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್.ವಿ. ಕೋನಪ್ಪ, ಅಪರ ಸಿವಿಲ್ ನ್ಯಾಯಾಧೀಶೆ ಮಹಾಲಕ್ಷಿö್ಮ, ವಕೀಲರ ಸಂಘದ ಅಧ್ಯಕ್ಷ ಐ.ಆರ್. ಪ್ರಮೋದ್, ಕಾರ್ಯದರ್ಶಿ ಎ.ಕೆ. ದಿನೇಶ್, ತಾಲೂಕು ಕಚೇರಿಯ ಶಿರಸ್ತೇದಾರ್ ಪ್ರದೀಪ್ ಕುಮಾರ್, ಪಟ್ಟಣ ಪಂಚಾಯಿತಿ ಅಧಿಕಾರಿ ಸೋಮೇಶ್, ನಗರ ಪೊಲೀಸ್ ಠಾಣಾಧಿಕಾರಿ ಜಗದೀಶ್ ದೂಳ್‌ಶೆಟ್ಟಿ, ಗ್ರಾಮಾಂತರ ಸಿದ್ಧಲಿಂಗ ಬಾಣಸೆ, ಸಿದ್ದಾಪುರ ಎಎಸ್‌ಐ ಗಣಪತಿ ಹಾಗೂ ಇತರರು ಉಪಸ್ಥಿತರಿದ್ದರು.