ಶನಿವಾರಸಂತೆ, ಜು. ೧೪: ಮುಖ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕೆಲಸ ಹಮ್ಮಿಕೊಂಡಿರುವ ಕಾರಣ ತಾ. ೧೫ ರಂದು (ಇಂದು) ಬೆಳಿಗ್ಗೆ ೧೦ ರಿಂದ ಸಂಜೆ ೪ ಗಂಟೆವರೆಗೆ ಯಸಳೂರು ಮತ್ತು ಶನಿವಾರಸಂತೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಳ್ಳಲಿದೆ. ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
*ಶನಿವಾರಸಂತೆ ಪಟ್ಟಣ, ತ್ಯಾಗರಾಜ ಕಾಲೋನಿ, ಗುಡುಗಳಲೆ, ಶಿಡಿಗಳಲೆ, ಹಾರೆಹೊಸೂರು, ಗೋಪಾಲಪುರ, ಹೆಬ್ಬುಲುಸೆ, ಕಿತ್ತೂರು, ಗೌಡಳ್ಳಿ, ಬೀಟಿಕಟ್ಟೆ ಮತ್ತಿತರ ಗ್ರಾಮಗಳಲ್ಲಿ ಬೆಳಿಗ್ಗೆ ೯.೩೦ ರಿಂದ ಸಂಜೆ ೪ ಗಂಟೆವರೆಗೆ ವಿದ್ಯುತ್ ಸಂಪರ್ಕ ಸ್ಥಗಿತಗೊಳ್ಳಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಸೆಸ್ಕ್ ಶಾಖಾಧಿಕಾರಿ ಹೇಮಂತ್ ಕುಮಾರ್ ಹಾಗೂ ಮೇಲ್ವಿಚಾರಕ ಲೋಕೇಶ್ ಕೋರಿದ್ದಾರೆ.