ಒಲಿಂಪಿಕ್‌ಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ವಿತರಣೆ
ಬೆಂಗಳೂರು, ಜು. ೧೪: ಜಪಾನ್‌ನ ಟೋಕಿಯೋದಲ್ಲಿ ನಡೆಯಲಿರುವ ಒಲಿಂಪಿಕ್ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಮೂವರು ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಘೋಷಣೆ ಮಾಡಲಾಗಿದ್ದ, ತಲಾ ಹತ್ತು ಲಕ್ಷ ರೂಪಾಯಿ ಪ್ರೋತ್ಸಾಹ ಧನವನ್ನು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ವಿತರಿಸಿದರು. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ಹೆಮ್ಮೆಯ ಕ್ರೀಡಾಪಟು ಶ್ರೀಹರಿ ನಟರಾಜ್ ಅವರಿಗೆ ಪ್ರೋತ್ಸಾಹಧನ ಚೆಕ್ ವಿತರಿಸಿದರು. ಅಧಿತಿ ಅಶೋಕ್, ಪೌವಾದ್ ಮಿರ್ಜಾ ಇವರುಗಳಿಗೆ ಅವರ ಪರವಾಗಿ ಅವರ ಪಾಲಕರಿಗೆ ತಲಾ ಹತ್ತು ಲಕ್ಷ ರೂಪಾಯಿಯ ಚೆಕ್ ಅನ್ನು ಸಿಎಂ ಯಡಿಯೂರಪ್ಪ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಹಸ್ತಾತಂತರಿಸಿ, ಶುಭಕೋರಿದರು. ಟೋಕಿಯೊ ಒಲಿಂಪಿಕ್‌ನಲ್ಲಿ ಚಿನ್ನದ ಪದಕಕ್ಕೆ ಮುತ್ತಿಕ್ಕಿದವರಿಗೆ ರೂ. ೫ ಕೋಟಿ, ಬೆಳ್ಳಿಗೆ -೩ ಹಾಗೂ ಕಂಚಿನ ಪದಕ ಗೆದ್ದವರಿಗೆ ರೂ. ೨ ಕೋಟಿ ನೀಡಿ ಪುರಸ್ಕರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದರು. ಈಜು ಸ್ಪರ್ಧೆ ವಿಭಾಗದಲ್ಲಿ ಇದೇ ಮೊದಲ ಬಾರಿಗೆ ಭಾರತ ತಂಡ ಭಾಗವಹಿಸುತ್ತಿದೆ. ಮೂವರು ಕ್ರೀಡಾಪಟುಗಳು ಆಯ್ಕೆಯಾಗಿದ್ದು, ಅವರಲ್ಲಿ ಓರ್ವ ಕ್ರೀಡಾಪಟು ಕರ್ನಾಟಕದವರು ಎನ್ನುವುದು ನಮಗೆ ಹೆಮ್ಮೆ ವಿಚಾರ. ಆಯ್ಕೆಯಾಗಿರುವ ಮೂವರೂ ಕ್ರೀಡಾಪಟುಗಳು ಚಿನ್ನದ ಪದಕ ಗೆದ್ದು ದೇಶದ ಕೀರ್ತಿಯನ್ನು ಹೆಚ್ಚಿಸಲಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಹೇಳಿದರು.
ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಗೆ ಚಾಲನೆ
ಬೆಂಗಳೂರು, ಜು. ೧೪: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-೨೦೨೧ ಅನಾವರಣಗೊಳಿಸಿದರು. ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿಗಳು ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-೨೦೨೧ ಜಾರಿಯಿಂದ ರಾಜ್ಯದಲ್ಲಿ ಸ್ವಯಂ ಉದ್ಯೋಗ ಸೃಷ್ಟಿ, ಪರಿಸರ ಸ್ನೇಹಿ ವಾತಾವರಣ ನಿರ್ಮಾಣ, ಇಂಧನ ಉಳಿತಾಯದ ಪ್ರೋತ್ಸಾಹ, ನಗರ ಸಾರಿಗೆ ಬಲಪಡಿಸುವುದು, ಉದ್ದಿಮೆ ಸ್ಥಾಪನೆಗೆ ಪ್ರೋತ್ಸಾಹಿಸುವುದು, ಪ್ರಯಾಣಿಕರು ಮತ್ತು ಸಾರ್ವಜನಿಕ ಸಾರಿಗೆ ನಡುವೆ ಸಂಪರ್ಕ ಕಲ್ಪಿಸುವುದರ ಬಗ್ಗೆ ಈ ಯೋಜನೆಯು ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಬೆಂಗಳೂರು ಮತ್ತು ಇತರ ಪ್ರಮುಖ ನಗರಗಳಲ್ಲಿ ಸಾರ್ವಜನಿಕರು ಬಸ್ ಮತ್ತು ರೈಲ್ವೆ, ಮೆಟ್ರೋ ನಿಲ್ದಾಣಗಳಿಂದ ಮನೆಗೆ ಮತ್ತು ಮನೆಯಿಂದ ಬಸ್ ಮತ್ತು ರೈಲ್ವೆ ನಿಲ್ದಾಣಗಳಿಗೆ ಸರಿಯಾದ ಸಮಯದಲ್ಲಿ ಪ್ರಯಾಣಿಸಲು ವ್ಯಯಿಸಬೇಕಾದ ಸಮಯ ಮತ್ತು ಶ್ರಮವನ್ನು ಕಡಿಮೆ ಮಾಡುವ ಉದ್ದೇಶ ಸರ್ಕಾರದ್ದಾಗಿದೆ ಎಂದು ಅವರು ನುಡಿದರು. ವಾಹನಗಳ ಚಾಲನೆಗೆ ಸಾಂಪ್ರದಾಯಿಕ ಇಂಧನಗಳ ಬಳಕೆಯಿಂದಾಗಿ ಪರಿಸರದ ಮೇಲೆ ಆಗುತ್ತಿರುವ ಪರಿಣಾಮಗಳ ಕುರಿತು ಆಗಿರುವ ಅಧ್ಯಯನಗಳ ಹಿನ್ನೆಲೆ ಪರ್ಯಾಯ ಇಂಧನಗಳನ್ನು ಬಳಸುವ ಮೂಲಕ ಸ್ವಚ್ಛ ಪರಿಸರವನ್ನು ನಮ್ಮ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವ ಸದುದ್ದೇಶದಿಂದ ವಿವಿಧ ಪರ್ಯಾಯ ಇಂಧನಗಳ ಬಳಕೆಗೆ ಸರ್ಕಾರವು ಉತ್ತೇಜನ ನೀಡುತ್ತಾ ಬಂದಿದೆ. ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಎಲೆಕ್ಟಿçಕ್ ವಾಹನಗಳ ನೀತಿಯನ್ನು ರೂಪಿಸಿದ ರಾಜ್ಯ ಕರ್ನಾಟಕ. ಇದೀಗ ಮತ್ತೊಂದು ಹೆಜ್ಜೆ ಮುಂದುವರಿದು, ರಾಜ್ಯದ ಪ್ರಮುಖ ನಗರ ವ್ಯಾಪ್ತಿಗೆ ಸಂಬAಧಿಸಿದAತೆ ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-೨೦೨೧ನ್ನು ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ ಎಂದು ಅವರು ವಿವರಿಸಿದರು. ಈ ಯೋಜನೆಯಲ್ಲಿ ಕಂಪೆನಿಗಳು, ಪಾಲುದಾರಿಕೆೆ ಕಂಪೆನಿಗಳು ಮತ್ತು ವೈಯಕ್ತಿಕ ಪ್ರಜೆಗಳೂ ಸಹ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಮತ್ತು ಉದ್ದಿಮೆದಾರರು ಮುಕ್ತವಾಗಿ ಈ ಯೋಜನೆ ಸದುಪಯೋಗ ಪಡೆಯಲೆಂಬ ಉದ್ದೇಶದಿಂದ ಸರ್ಕಾರವು ಹಲವಾರು ರಿಯಾಯಿತಿಗಳನ್ನು ನೀಡಿರುತ್ತದೆ. ಸಾರಿಗೆ ವಾಹನಗಳಾಗಿ ನೋಂದಣಿಯಾಗುವ ಎಲೆಕ್ಟಿçಕ್ ಬೈಕ್ ಟ್ಯಾಕ್ಸಿಗಳಿಗೆ ಪರವಾನಗಿಯಿಂದ ವಿನಾಯಿತಿ ನೀಡುವುದು, ತೆರಿಗೆ ವಿನಾಯಿತಿ ನೀಡುವುದು, ಈ ವಾಹನಗಳ ಉತ್ಪಾದಕರಿಗೆ ಸಹಾಯ ಧನವನ್ನು ನೀಡುವುದು ಸೇರಿದಂತೆ ಇನ್ನೂ ಹಲವಾರು ರಿಯಾಯಿತಿಗಳನ್ನು ನೀಡಲಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ವಾಹನ ಉತ್ಪಾದಕರು, ಉದ್ದಿಮೆದಾರರು ಮತ್ತು ಸಾರ್ವಜನಿಕರು ಈ ಯೋಜನೆಗಳ ಪ್ರಯೋಜನವನ್ನು ಪಡೆದು ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ವಲಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮಾಡುವಂತೆ ಹಾಗೂ ಮಹಿಳಾ ಉದ್ದಿಮೆದಾರರು ಈ ಯೋಜನೆಯ ಅನುಕೂಲವನ್ನು ಪಡೆದುಕೊಳ್ಳುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಕನ್ನಡ ಕಲಿಕೆ ಕುರಿತು ಯಾವುದೇ ರಾಜಿಗೆ ಅವಕಾಶವಿಲ್ಲ
ಬೆಂಗಳೂರು, ಜು. ೧೪: ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬAಧದ ಕನ್ನಡ ಕಲಿಕಾ ಅಧಿನಿಯಮ-೨೦೧೫ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಸ್ಪಷ್ಟಪಡಿಸಿದ್ದಾರೆ. ಹೊರನಾಡು ಕನ್ನಡಿಗರ ಒಂದು ವರ್ಗ ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ ಎಂಬ ಹಿನ್ನೆಲೆ ಅಧಿನಿಯಮ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ, ಮನವಿ ನಂತರ ಮಾತನಾಡಿದ ಸಚಿವರು, ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ ಕನ್ನಡವನ್ನು ಕಡ್ಡಾಯವಾಗಿ ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದ್ದು, ಸರ್ಕಾರ ಈ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ವಹಿಸಲಿದೆ ಎಂದರು. ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳು ಕನ್ನಡ ಭಾಷಾ ಕಲಿಕಾ ಅಧಿನಿಯಮ-೨೦೧೫ರ ಪ್ರಕಾರ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದೆ. ಒಂದರಿAದ ಹತ್ತನೇ ತರಗತಿಯವರಿಗೆ ಹಂತಹAತವಾಗಿ ಕನ್ನಡ ಭಾಷೆಯನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕಿದೆ. ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಹೊರ ರಾಜ್ಯದ ಪೋಷಕರ ಒಂದು ವರ್ಗ ವಿರೋಧಿಸಿ ಈ ಕಡ್ಡಾಯ ಕನ್ನಡ ಕಲಿಕೆಯನ್ನು ಕೈಬಿಡಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಒತ್ತಾಯಿಸುತ್ತಿದ್ದು, ಇದು ಕನ್ನಡ ಭಾಷಾ ಕಲಿಕಾ ಅಧಿನಿಯಮ-೨೦೧೫ಕ್ಕೆ ವಿರುದ್ಧವಾಗಿದೆ. ಅಲ್ಲದೇ ಈ ನೆಲದ ಸಂಸ್ಕೃತಿಯನ್ನು ವಿರೋಧಿಸುವಂತಹುದ್ದಾಗಿದೆ. ಈ ಕುರಿತಂತೆ ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳು ಯಾವುದೇ ಆಗ್ರಹಕ್ಕೂ ಮಣಿಯದೇ ಕಟ್ಟುನಿಟ್ಟಾಗಿ ಕನ್ನಡ ಕಲಿಕೆಯನ್ನು ಕಡ್ಡಾಯವಾಗಿ ಕಲಿಸುವುದಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಪೋಷಕರೂ ಕೂಡ ತಮ್ಮ ಜವಾಬ್ದಾರಿಯನ್ನು ಅರಿತು ಸರ್ಕಾರದ ಸದಾಶಯವನ್ನು ಗೌರವಿಸಬೇಕು. ತಮ್ಮ ಮಕ್ಕಳನ್ನು ನೆಲದ ಭಾಷೆ ಕಲಿಯಲು ಪ್ರೇರೇಪಿಸಬೇಕೆಂದು ಸಚಿವರು ಹೇಳಿದರು.