ಮಡಿಕೇರಿ, ಜು. ೧೪: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರು ತಾ. ೧೬ ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅAದು ಬೆಳಿಗ್ಗೆ ೯.೩೦ ಗಂಟೆಗೆ ಕುಶಾಲನಗರ ಹಾರಂಗಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸುವ ಕುರಿತಂತೆ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬೆಳಿಗ್ಗೆ ೧೦.೩೦ ಗಂಟೆಗೆ ಹಾರಂಗಿ ಜಲಾಶಯದ ಅಚ್ಚುಕಟ್ಟು ಪ್ರದೇಶಗಳಿಗೆ ೨೦೨೧ ರ ಮುಂಗಾರು ಹಂಗಾಮಿನಲ್ಲಿ ನೀರು ಒದಗಿಸುವ ಬಗ್ಗೆ ಹಾರಂಗಿ ಜಲಾಶಯ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಟಿ.ಎನ್. ರವಿಪ್ರಕಾಶ್ ತಿಳಿಸಿದ್ದಾರೆ.