ಕಣಿವೆ, ಜು. ೧೪: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಪುನರ್ವಸು ಮಳೆಯಿಂದಾಗಿ ಜೀವನದಿ ಕಾವೇರಿಯಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.

ಈ ಹಿನ್ನೆಲೆ ಪ್ರಮುಖ ಪ್ರವಾಸಿ ತಾಣ ದುಬಾರೆಯ ಕಾವೇರಿ ನದಿ ದಂಡೆಯಲ್ಲಿರುವ ಗಿರಿಜನರು ದೈನಂದಿನ ಸಂಚಾರಕ್ಕೆ ಅನುಕೂಲ ಒದಗಿಸಲು ಜಿಲ್ಲಾಡಳಿತ ಯಾಂತ್ರಿಕ ದೋಣಿಯನ್ನು ಮೀಸಲಿಡಲಾಗಿದೆ.

ಹಾಗೆಯೇ ದುಬಾರೆಯಲ್ಲಿರುವ ಸಾಕಾನೆ ಶಿಬಿರಕ್ಕೆ ತೆರಳಲು ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಯಾಂತ್ರಿಕ ದೋಣಿಯನ್ನೇ ಅವಲಂಬಿಸಿದ್ದಾರೆ.

ಸತತವಾಗಿ ಎರಡು ವರ್ಷ ಗಳಿಂದ ಬೆಂಬಿಡದೇ ಕಾಡುತ್ತಿರುವ ಕೊರೊನಾ ಕಾರಣದಿಂದ ಆಗಿಂದಾಗ್ಗೆ ತಿಂಗಳುಗಟ್ಟಲೇ ಲಾಕ್‌ಡೌನ್ ಆದ ಹಿನ್ನೆಲೆ ಪ್ರವಾಸಿ ಜಿಲ್ಲೆ ಕೊಡಗಿನಲ್ಲಿ ಪ್ರವಾಸಿ ಚಟುವಟಿಕೆಗಳು ನಿಂತ ನೀರಾಗಿವೆ.