ಮಡಿಕೇರಿ, ಜು. ೧೪: ಜಿಲ್ಲೆಯಲ್ಲಿ ಬುಧವಾರ ೪೪ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ ೧೬, ಸೋಮವಾರಪೇಟೆ ತಾಲೂಕಿನಲ್ಲಿ ೨೪, ವೀರಾಜಪೇಟೆ ತಾಲೂಕಿನಲ್ಲಿ ೪ ಪ್ರಕರಣಗಳು ಕಂಡು ಬಂದಿವೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೦,೭೪೮ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೧೦ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೨೯,೮೯೪ ಮಂದಿ ಗುಣಮುಖರಾಗಿದ್ದಾರೆ. ೪೭೨ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ. ಒಟ್ಟು ೩೮೨ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೧೨೦ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೧.೯೪ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.