ಮಡಿಕೇರಿ, ಜು. ೧೬: ಕೋವಿಡ್ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿದ ಕೆ.ನಿಡುಗಣೆ ಗ್ರಾಮ ಪಂಚಾಯ್ತಿ ಕಾರ್ಯವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭನ್ವರ್ ಸಿಂಗ್ ಮೀನಾ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಅಭಿನಂದನಾ ಪತ್ರ ಬರೆದಿರುವ ಸಿಇಓ ಅವರು, ಪಂಚಾಯ್ತಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋವಿಡ್ ಸಮಯದಲ್ಲಿ ಗ್ರಾಮದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆದು ಅಲ್ಲಿ ಅಗತ್ಯವಾದ ಚಿಕಿತ್ಸೆ ನೀಡಿ ಜಿಲ್ಲೆಗೆ ಮಾದರಿ ಕ್ರಮಕೈಗೊಂಡಿದ್ದೇವೆ ಎಂದು ಗ್ರಾ.ಪಂ ಅಧ್ಯಕ್ಷ ಕೊಕ್ಕಲೇರ ಅಯ್ಯಪ್ಪ ತಿಳಿಸಿದ್ದಾರೆ.