ಕೂಡಿಗೆ, ಜು. ೧೬: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಂದರನಗರ ಸರ್ಕಲ್ ಸಮೀಪದಲ್ಲಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತವಾದ ಮಾಹಿತಿ ಮೇರೆಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ಇಬ್ಬರು ಆರೋಪಿಗಳಾದ ಶಾಫಿ, ಹಾವಜ್ ಅವರನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಕುಶಾಲನಗರ ಗ್ರಾಮಾಂತರ ಠಾಣಾಧಿಕಾರಿ ಶಿವಶಂಕರ್, ಸಿಬ್ಬಂದಿಗಳಾದ ಶ್ರೀನಿವಾಸ್, ಪ್ರವೀಣ್, ಪ್ರೇಮತ್, ಮಹಮದ್, ಚಾಲಕ ಯೋಗೇಶ್ ಇದ್ದರು.