ಮಡಿಕೇರಿ, ಜು. ೧೬: ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾಗಿ ನಗರ ಸಭಾ ಸದಸ್ಯ ರಾಜೇಶ್ ಯಲ್ಲಪ್ಪ ಅವರನ್ನು ನೇಮಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಧರ್ಮಜಾ ಉತ್ತಪ್ಪ ಅವರು ನೇಮಕಾತಿ ಆದೇಶ ನೀಡಿದರು.
ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೆಪಿಸಿಸಿ ಸಂಯೋಜಕ ಹೆಚ್.ಎಂ. ನಂದಕುಮಾರ್ ಕೆಪಿಸಿಸಿ ಪ್ಯಾನಲಿಸ್ಟ್ ಟಿ.ಪಿ. ರಮೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಟ್ಟಮುಡಿ ಹಂಸ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯಾ ಅಬ್ರಾರ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನೀರಾ ಮೈನಾ, ಮಾಜಿ ನಗರಾಧ್ಯಕ್ಷ ಅಬ್ದುಲ್ ರಜಾಕ್, ಮಾಜಿ ಮೂಡಾ ಅಧ್ಯಕ್ಷ ಚುಮ್ಮಿದೇವಯ್ಯ, ಓಂಕಾರೇಶ್ವರ ದೇವಾಲಯ ಸಮಿತಿ ಮಾಜಿ ಅಧ್ಯಕ್ಷ ಪುಲಿಯಂಡ ಜಗದೀಶ್, ನಗರ ಸಭೆ ಮಾಜಿ ಅಧ್ಯಕ್ಷೆ ಜುಲೇಕಾಬಿ ಸೇರಿದಂತೆ ಮುಖಂಡರು ಭಾಗವಹಿಸಿದ್ದರು.