ಮಡಿಕೇರಿ, ಜು.೧೬: ಜಿಲ್ಲೆಯಲ್ಲಿ ಶುಕ್ರವಾರ ೪೫ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೩೫ ಆರ್‌ಟಿಪಿಸಿಆರ್ ಮತ್ತು ೧೦ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ ೧೫ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೪ ಪ್ರಕರಣಗಳು ಆರ್‌ಟಿಪಿಸಿಆರ್ ಮತ್ತು ೦೧ ಪ್ರಕರಣ ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ ೧೬ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೧೪ ಆರ್‌ಟಿಪಿಸಿಆರ್ ಮತ್ತು ೦೨ ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವೀರಾಜಪೇಟೆ ತಾಲೂಕಿನಲ್ಲಿ ೧೪ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿದೆ. ಈ ಪೈಕಿ ೦೭ ಆರ್‌ಟಿಪಿಸಿಆರ್ ಮತ್ತು ೦೭ ಪ್ರಕರಣ ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೦,೮೫೩ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೧೦೮ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೦,೦೩೧ ಮಂದಿ ಗುಣಮುಖರಾಗಿದ್ದಾರೆ. ೪೩೮ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೦೧ ಸಾವು ಉಂಟಾಗಿದ್ದು, ಒಟ್ಟು ೩೮೪ ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ ೧೦೭ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೨.೦೬ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.