ಮಡಿಕೇರಿ ಜು.೧೭ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ರಾಜ್ಯದ ಎಲ್ಲಾ ಹಂತದ ನ್ಯಾಯಾಲಯಗಳಲ್ಲಿ ಆಗಸ್ಟ್, ೧೪ ರಂದು ಮೆಗಾ ಲೋಕ ಅದಾಲತ್ ಆಯೋಜಿಸಲಾಗಿದ್ದು, ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲಾ ನ್ಯಾಯಾಲಯ ದಲ್ಲಿಯೂ ನಡೆಯಲಿದೆ. ನ್ಯಾಯಾಲ ಯದಲ್ಲಿ ವ್ಯಾಜ್ಯ ಎದುರಿಸುತ್ತಿರುವವರು ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿನರಾಳಕರ್ ಭೀಮರಾವ್ ಲಗಮಪ್ಪ ಅವರು ತಿಳಿಸಿದ್ದಾರೆ.

ಜಿಲ್ಲಾ ನ್ಯಾಯಾಲಯ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಿ ಸಂಧಾನದ ಮೂಲಕ ಇತ್ಯರ್ಥವಾಗುವ ಪ್ರಕರಣಗಳನ್ನು ಪರಿಹರಿಸಲಾಗುವುದು. ಸಾರ್ವಜನಿಕ ಹಿತಾಸಕ್ತಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಲು ಮೆಗಾ ಲೋಕ ಅದಾಲತ್ ಏರ್ಪಡಿಸಲಾಗಿದೆ. ಆ ದಿಸೆಯಲ್ಲಿ ಈ ಅವಕಾಶವನ್ನು ಬಳಸಿಕೊಳ್ಳುವಂತಾಗಬೇಕು ಎಂದು ಕೋರಿದರು.

ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲು ಪಡುವ ಪ್ರಕರಣಗಳು ಸೇರಿದಂತೆ ಕಾರ್ಮಿಕ ವಿವಾದಗಳು, ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬAಧಿಸಿದ ಕ್ಲೇಮುಗಳು, ವಿದ್ಯುತ್ ಮತ್ತು ನೀರಿನ ಶುಲ್ಕಗಳು, ಮೈಂಟೆನ್ಸ್ ಪ್ರಕರಣಗಳು ಹಾಗೆಯೇ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಲ್ಲ ಅಪರಾಧಿತ ಪ್ರಕರಣಗಳು, ಆರ್ಥಿಕ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ, ನ್ಯಾಯಾಧೀಕರಣ ಪ್ರಕರಣಗಳು, ವೇತನ ಹಾಗೂ ಭತ್ಯೆಗೆ ಸಂಬAಧಿಸಿದ ಸೇವಾ ಪ್ರಕರಣಗಳು, ಬಾಡಿಗೆ, ಅನುಬೋಗ ಹಕ್ಕುಗಳು ಹೀಗೆ ಹಲವು ರೀತಿಯ ಪ್ರಕರಣಗಳನ್ನು ಮೆಗಾ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಅದಾಲತ್‌ನಲ್ಲಿ ಇತ್ಯರ್ಥವಾಗುವ ಪ್ರಕರಣಗಳಲ್ಲಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರುವ ಪ್ರಕರಣಗಳು ಅಪರೂಪ. ಬಹುತೇಕ ಪ್ರಕರಣಗಳು ರಾಜಿ ಸಂಧಾನದ ಮೂಲಕ ಮುಕ್ತ್ತಾಯಗೊಳ್ಳುತ್ತವೆ. ಅತ್ಯಾಚಾರ, ವಿಚ್ಛೇದನ ಸೇರಿದಂತೆ ಕೆಲವೊಂದು ಅಪರಾಧ ಪ್ರಕರಣಗಳನ್ನು ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗು ವದಿಲ್ಲ, ಅಂತಹುಗಳು ನ್ಯಾಯಾಲ ಯದ ತೀರ್ಪಿನ ಮೂಲಕವೇ ಆಗಬೇಕಿದೆ ಎಂದು ತಿಳಿಸಿದರು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕೊಳ್ಳಲು ಇಚ್ಛಿಸಿದ್ದಲ್ಲಿ ಮುಂಚಿತ ವಾಗಿಯೇ ಸಂಬAಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಸಮಿತಿಗೆ ಆನ್‌ಲೈನ್, ವೀಡಿಯೋ ಕಾನ್ಫರೆನ್ಸ್, ಇ-ಮೇಲ್, ಎಸ್.ಎಂ.ಎಸ್., ವಾಟ್ಸ್ಅಪ್, ಎಲೆಕ್ಟಾçನಿಕ್ ಮೋಡ್, ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

೧೮೩೫೬ ಪ್ರಕರಣಗಳು

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಸುಬ್ರಮಣ್ಯ ಮಾತನಾಡಿ ಜಿಲ್ಲೆಯಲ್ಲಿ ಜುಲೈ, ೧೬ ರವರೆಗೆ ೫೪೫೬ ಸಿವಿಲ್ ಹಾಗೂ ೧೨೯೦೦ಕ್ರಿಮಿನಲ್ ಪ್ರಕರಣಗಳು ಸೇರಿದಂತೆ ಒಟ್ಟು ೧೮,೩೫೬ ಪ್ರಕರಣಗಳು ಇತ್ಯರ್ಥಕ್ಕೆ ಬಾಕಿ ಇದೆ. ಈ ಪೈಕಿ ಬಹುತೇಕ ಪ್ರಕರಣಗಳು ಅದಾಲತ್‌ನಲ್ಲಿ ಇತ್ಯರ್ಥವಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದರು.

ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ ೦೮೨೭೨-೨೨೨೩೭೩ ಇ-ಮೇಲ್-ಜಟsಚಿmಚಿಜiಞeಡಿi@gmಚಿiಟ.ಛಿomನ್ನು ಸಂಪರ್ಕಿಸಬಹುದಾಗಿದೆ.