ಕರಿಕೆ,ಜು. ೧೭: ಕೇರಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಹಾಗೂ ಝಿಕಾ ವೈರಸ್ ಪತ್ತೆಯಾದ ಹಿನ್ನೆಲೆ ಜಿಲ್ಲೆಯ ಗಡಿಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲು ಸರಕಾರ ಆದೇಶ ಹೊರಡಿಸಿದ್ದು, ಅದರಂತೆ ಕರಿಕೆಯಲ್ಲಿ ತಪಾಸಣೆ ಚುರುಕುಗೊಂಡಿದೆ.

ಲಾಕ್‌ಡೌನ್ ತೆರವಾದ ದಿನದಿಂದ ಓರ್ವ ಪೊಲೀಸ್ ಉಪನಿರೀಕ್ಷಕರ ನೇತೃತ್ವದಲ್ಲಿ ಪೊಲೀಸ್, ಅರಣ್ಯ, ಅಬ್ಕಾರಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದು, ಕನಿಷ್ಟ ಒಂದು ಬಾರಿ ಕೋವಿಡ್ ಲಸಿಕೆ ಹಾಗೂ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ ಹೊರ ರಾಜ್ಯದವರಿಗೆ ಪ್ರವೇಶಕ್ಕೆ ಅವಕಾಶವಿದ್ದು ಸ್ಥಳೀಯ ರಿಗೆ ತುರ್ತು ಅಗತ್ಯಕ್ಕೆ ಮಾತ್ರವೇ ಪಾಣತ್ತೂರುಗೆ ತೆರಳಲು ಅನುಮತಿ ನೀಡಿದೆ. ಅಲ್ಲದೆ ಕರಿಕೆಯಲ್ಲಿ ೪೫ ಸಕ್ರಿಯ ಕೋವಿಡ್ ಪಾಸಿಟಿವ್ ಪ್ರಕರಣಗಳಿದ್ದು, ಆಯಾ ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.