ಮಡಿಕೇರಿ, ಜು. ೧೭: ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ೨೦೨೧-೨೨ನೇ ಸಾಲಿನಲ್ಲಿ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ಕಾನೂನು ಪದವೀಧರರಿಗೆ ನುರಿತ ವಕೀಲರಿಂದ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. ೩೧ ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ ತಿತಿತಿ.ಜom. ಞಚಿಡಿಟಿಚಿಣಚಿಞಚಿ.gov.iಟಿ ಅನ್ನು ಮತ್ತು ಕಚೇರಿ ದೂ.ಸಂ. ೦೮೨೭೨-೨೨೫೫೨೮/೨೨೦೨೧೪ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜಪ್ಪ ತಿಳಿಸಿದ್ದಾರೆ.