ಮಡಿಕೇರಿ, ಜು. ೧೭: ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ದಕ್ಷಿಣ ವಲಯದ ಪೊಲೀಸ್ ಮಹಾನಿರ್ದೇಶಕ (ಐಜಿ) ಪ್ರವೀಣ್ ಮಧುಕರ್ ಪವಾರ್ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧.೪೫ರ ತನಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲೆಯ ಎಲ್ಲಾ ಡಿ.ವೈ.ಎಸ್.ಪಿ. ಹಾಗೂ ವೃತ್ತ ನಿರೀಕ್ಷಕರೊಂದಿಗೆ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಚರ್ಚೆ ನಡೆಸಿ ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಜಿಲ್ಲೆಯಲ್ಲಿ ಅಪರಾಧ ತಡೆಗೆ ಕೈಗೊಂಡ ಕ್ರಮದ ಬಗ್ಗೆ ಪ್ರಗತಿ ಪರಿಶೀಲಿಸಿದ್ದಾರೆ. ಹಾಗೆಯೇ ಕಳೆದ ಬಜೆಟ್‌ನಲ್ಲಿ ಕೊಡಗು ಜಿಲ್ಲಾ ಪೊಲೀಸ್ ಕಚೇರಿ ನಿರ್ಮಾಣ ಸಂಬAಧ ಘೋಷಣೆಯಾದ ಯೋಜನೆಯ
(ಮೊದಲ ಪುಟದಿಂದ) ಸ್ಥಳ ಪರಿಶೀಲನೆ ಮಾಡಿದ್ದಾರೆ.
ಜಿಲ್ಲಾ ಪೊಲೀಸ್ ಕಚೇರಿಯ ಖಜಾನೆ ವಿಭಾಗದಲ್ಲಿ ಹಣ ದುರುಪಯೋಗಕ್ಕೆ ಸಂಬAಧಿಸಿದAತೆ ‘ಶಕ್ತಿ’ಯೊಂದಿಗೆ ಪ್ರತಿಕ್ರಿಯಿಸಿದ ಪ್ರವೀಣ್ ಮಧುಕರ್ ಅವರು, ಈಗಾಗಲೇ ಘಟನೆ ಸಂಬAಧ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಪ್ರಕರಣ ಕೂಡ ದಾಖಲಿಸಿಕೊಳ್ಳಲಾಗಿದೆ. ಮೂವರು ಸಿಬ್ಬಂದಿಗಳನ್ನು ಅಮಾನತ್ತು ಮಾಡಿ ಬಂಧಿಸಲಾಗಿದೆ. ಮುಂದೆ ಈ ರೀತಿಯ ಘಟನೆ ಮರುಕಳಿಸಬಾರದು, ಆ ನಿಟ್ಟಿನಲ್ಲಿ ಸೂಚಿಸಿದ್ದೇನೆ ಎಂದರು.
ಪೊಲೀಸರ ದೌರ್ಜನ್ಯದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿರುವ ವೀರಾಜಪೇಟೆಯ ಮಾನಸಿಕ ಅಸ್ವಸ್ಥ ರಾಯ್ ಡಿಸೋಜಾ ಸಾವಿನ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರತಿಕ್ರಿಯೆ ನೀಡಿದ ಅವರು, ಸಿಐಡಿ ಈ ಬಗ್ಗೆ ತನಿಖೆ ಕೈಗೊಂಡಿದ್ದು, ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಕ್ರಮವಾಗುತ್ತದೆ ಎಂದು ಭರವಸೆ ನೀಡಿದರು.
ಈ ಸಂದರ್ಭ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಡಿವೈಎಸ್ಪಿಗಳಾದ ಹೆಚ್.ಎಂ. ಶೈಲೇಂದ್ರ, ಸಿ.ಟಿ. ಜಯಕುಮಾರ್, ಜಿಲ್ಲೆಯ ಎಲ್ಲಾ ಪೊಲೀಸ್ ವೃತ್ತ ನಿರೀಕ್ಷಕರು ಹಾಜರಿದ್ದರು.