ಕೂಡಿಗೆ, ಜು. ೧೭: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದ ಕಾಡೇರ ತಿಮ್ಮಯ್ಯ (ರವಿ) ಎಂಬವರ ಪುತ್ರ ಸುಮಂತ್ (೨೪) ಎಂಬಾತ ಮೈಸೂರಿನ ಹೆಬ್ಬಾಳಿನಲ್ಲಿ ಮನೆಯ ಮೂರನೆಯ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಸುಮಂತ್‌ಗೆ ಅನಾರೋಗ್ಯದ ನಿಮಿತ್ತ ಚಿಕಿತ್ಸೆಗಾಗಿ ಮೈಸೂರಿಗೆ ಕಳುಹಿಸಲಾಗಿತ್ತು. ಚಿಕಿತ್ಸೆ ಪಡೆಯುವ ಸಂದರ್ಭದಲ್ಲಿ ಮನನೊಂದು ಮನೆಯೊಂದರ ಮಹಡಿಯಿಂದ ಬಿದ್ದು ಸಾವನ್ನಪ್ಪಿರುತ್ತಾರೆ ಎಂದು ತಿಳಿದುಬಂದಿದೆ. ಮೈಸೂರಿನ ಮೆಟ್ಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.