ವೀರಾಜಪೇಟೆ, ಜು. ೧೭: ಪ್ರಸ್ತುತ ಸಮಾಜದಲ್ಲಿ ಸ್ವಸಹಾಯ ಸಂಘಗಳಿಗೆ ನೀಡುವ ಯೋಜನೆಗಳಿಂದ ಮಹಿಳೆಯು ಆರ್ಥಿಕವಾಗಿ ಸದೃಢವಾಗಿ ಮುಂದುವರೆಯಲು ಸಾಧ್ಯವಾಗಿದೆ ಎಂದು ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಮತ್ತು ಐ.ಡಿ.ಬಿ.ಐ. ಬ್ಯಾಂಕ್ಗಳ ಸಹಯೋಗದೊಂದಿಗೆ ಅರಮೇರಿ ಕಳಂಚೇರಿ ಮಠದ ಲಿಂಗರಾಜೇAದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸ್ವಸಹಾಯ ಸಂಘಗಳಿAದ ಪಾಲುದಾರ ಸದಸ್ಯರಿಗೆ ಲಾಭಾಂಶ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸ್ವಾಮೀಜಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗಳಿಂದಾಗಿ ಗ್ರಾಮೀಣ ಭಾಗದ ಮಹಿಳೆಯು ಆರ್ಥಿಕವಾಗಿ ಸದೃಢಳಾಗಿ ಕುಟುಂಬವನ್ನು ಉನ್ನತ ಪಥದಲ್ಲಿ ಸಾಗಿಸುವಲ್ಲಿ ಯಶಸ್ವಿಯಾಗಿದ್ದಾಳೆ. ಗ್ರಾಮಾಭಿವೃದ್ಧಿ ಯೋಜನೆಗಳು ಹೊಸ ದಿಕ್ಕಿನತ್ತ ಸಾಗಿವೆ ಎಂದರು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಸಂಸ್ಥೆಯ ಕೊಡಗು ಜಿಲ್ಲಾ ನಿರ್ದೇಶಕ ಡಾ. ಯೋಗೇಶ್ ಮಾತನಾಡಿ, ೧೯೮೨ರಲ್ಲಿ ಆರಂಭವಾದ ಸಂಸ್ಥೆಯು ರಾಜ್ಯದಾದ್ಯಂತ ತನ್ನ ಸೇವಾ ವ್ಯಾಪ್ತಿಯನ್ನು ವಿಸ್ತರಿಸಿ ಗ್ರಾಮೀಣ ಭಾಗದ ಮಹಿಳೆಯರನ್ನು ಆರ್ಥಿಕ ಸಬಲೀಕರಣ ಮಾಡುವತ್ತ ಬೃಹತ್ ಯೋಜನೆಗಳನ್ನು ಹುಟ್ಟುಹಾಕಿದೆ. ಕೊಡಗು ಜಿಲ್ಲೆಯಲ್ಲಿ ಒಟ್ಟು ೧೮ ಕೋಟಿ ೮೫ ಲಕ್ಷ ರೂಪಾಯಿಗಳು ಲಾಭಾಂಶ ರೂಪದಲ್ಲಿ ಸ್ವಸಹಾಯ ಸಂಘಗಳಿಗೆ ವಿತರಣೆಯಾಗುತ್ತದೆ ಎಂದರು.
ಕಾಕೋಟುಪರAಬು ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇವಡ ಗಿರೀಶ್ ಅತಿಥಿಗಳಾಗಿ ಮಾತನಾಡಿ, ಸಂಸ್ಥೆಯ ವಿವಿಧ ಯೋಜನೆಗಳಿಂದಾಗಿ ಗ್ರಾಮೀಣ ಭಾಗದ ಜನತೆಯು ಆರ್ಥಿಕವಾಗಿ ಸದೃಢರಾಗಿದ್ದರೆ ಎಂದರು.
ವೀರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಠಾಣಾಧಿಕಾರಿ ಸಿದ್ದಲಿಂಗ ಬಿ. ಬಾಣಸೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಕದನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಲತಾ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೀರಾಜಪೇಟೆ ಮತ್ತು ಮಡಿಕೇರಿ ತಾಲೂಕು ಯೋಜನಾಧಿಕಾರಿ ಪದ್ಮಯ್ಯ ಸ್ವಾಗತಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಡಂಗ, ಕಾಕೋಟುಪರಂಬು, ಬೊಳ್ಳುಮಾಡು, ಕುಂಜಿಲಗೇರಿ, ಕದನೂರು ಗ್ರಾಮದ ಸ್ವಸಹಾಯ ಸಂಘಗಳಿಗೆ ಲಾಭಾಂಶದ ಚೆಕ್ ವಿತರಿಸಲಾಯಿತು.
ಈ ಸಂದರ್ಭ ಸಂಘದ ಸದಸ್ಯೆ ನಳಿನಿ ಬಿಂದು ಕೋವಿಡ್ ಕುರಿತಂತೆ ಕವನ ವಾಚಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸ್ವಸಹಾಯ ಸಂಘದ ಸದಸ್ಯರು, ಸೇವಾ ಪ್ರತಿನಿಧಿಗಳಾದ ತೇಜಸ್ವಿನಿ, ರೀನಾ, ಪದ್ಮಲತಾ, ಮೀನಾಕ್ಷಿ, ರೇಖಾ ಹಾಜರಿದ್ದರು. ವಲಯ ಮೇಲ್ವಿಚಾರಕಿ ರತ್ನ ಮೈಪಾಲ ನಿರೂಪಿಸಿ, ಸಮನ್ವಯಾಧಿಕಾರಿ ಶ್ರೇಯ ವಂದಿಸಿದರು.