ಮಡಿಕೇರಿ, ಜು. ೧೯: ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರ ೭೦ನೇ ವರ್ಷದ ಜನ್ಮದಿನ ಪ್ರಯುಕ್ತ ತಾ. ೨೦ ರಂದು (ಇಂದು) ಮಧ್ಯಾಹ್ನ ೨ ಗಂಟೆಗೆ ಕುಶಾಲನಗರ ತಾಲೂಕಿನ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ಆದಿವಾಸಿಗಳಿಗೆ ಟಾರ್ಪಲ್ ವಿತರಣಾ ಕಾರ್ಯಕ್ರಮ ನಡೆಯಲಿದೆ.

ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಸಿ.ಶಿವಕುಮಾರ, ಪತ್ರಕರ್ತರು ಹಾಗೂ ಕೃಷಿಕ ಚಿನ್ನಸ್ವಾಮಿ ವಡ್ಡಗೆರೆ ಇತರರು ಪಾಲ್ಗೊಳ್ಳಲಿದ್ದಾರೆ.