ಸುಂಟಿಕೊಪ್ಪ : ಸುಂಟಿಕೊಪ್ಪ ಸರಕಾರಿ ಪ್ರೌಢಶಾಲೆ ಮತ್ತು ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರೀಕ್ಷಾ ಎಸ್ಸೆಸ್ಸೆಲ್ಸಿ ಕೇಂದ್ರಗಳಲ್ಲಿ ಹೋಬಳಿ ವ್ಯಾಪ್ತಿಯ ವಿವಿಧ ಪ್ರೌಢಶಾಲೆಗಳ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಉತ್ತ್ಸುಕತೆಯಿಂದ ಪರೀಕ್ಷೆಯನ್ನು ಎದುರಿಸಿದರು.
ಸಂತಮೇರಿ ಶಾಲೆಯಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆಯ ಜಿಲ್ಲಾ ಉಸ್ತುವಾರಿ ನೋಡಲ್ ಅಧಿಕಾರಿ ಕರ್ನಾಟಕ ಪಠ್ಯಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ ಭೇಟಿ ನೀಡಿ ಪರಿಶೀಲಿಸಿದರು.
ಸಂತಮೇರಿ ಶಾಲೆ ಹಾಗೂ ಸರ್ಕಾರಿ ಪ್ರೌಢಶಾಲಾ ಪರೀಕ್ಷಾ ಕೇಂದ್ರಕ್ಕೆ ಡಿಡಿಪಿಐ ಎ.ಶ್ರೀಧರನ್, ಜಾಗೃತ ದಳದ ಅಧಿಕಾರಿಗಳಾದ ಶಿವಕುಮಾರ್, ಶಶಿಧರ್ ಮತ್ತಿತರರು ಭೇಟಿ ನೀಡಿದ್ದರು.
೧೯೫ ವಿದ್ಯಾರ್ಥಿಗಳ ಪೈಕಿ ಎಲ್ಲಾ ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದರು.
ಬಸ್ ವ್ಯವಸ್ಥೆ
ಬಾಳೆಲೆಯಿಂದ ತಿತಿಮತಿ ಪರೀಕ್ಷಾ ಕೇಂದ್ರಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಬಸ್‌ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ಸಿಂಪಡಿಸಲಾಯಿತು.