ಕುಶಾಲನಗರ : ಕುಶಾಲನಗರ ಪಟ್ಟಣದ ಮೂರು ಮತ್ತು ಗ್ರಾಮಾಂತರ ಪ್ರದೇಶದ ಕೂಡಿಗೆ ಮತ್ತು ಹೆಬ್ಬಾಲೆಯಲ್ಲಿ ತಲಾ ಒಂದು ಕೇಂದ್ರದಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಿದ್ದರು. ಕುಶಾಲನಗರ ಸರ್ಕಾರಿ ಜೂನಿಯರ್ ಕಾಲೇಜು, ಫಾತಿಮಾ ಪ್ರೌಢಶಾಲೆ ಮತ್ತು ಫಾತಿಮಾ ಕಾನ್ವೆಂಟ್‌ನಲ್ಲಿ ಮೂರು ಪರೀಕ್ಷಾಕೇಂದ್ರಗಳು ಕಾರ್ಯನಿರ್ವಹಿಸಿದವು.

ಶಿಕ್ಷಣ ಇಲಾಖೆಯ ಮಾರ್ಗಸೂಚಿಯಂತೆ ಎಲ್ಲಾ ವಿದ್ಯಾರ್ಥಿಗಳು ಕೋವಿಡ್ ತಪಾಸಣೆ ಒಳಪಡಿಸುವ ಕಾರ್ಯ ನಡೆಯಿತು. ಪಟ್ಟಣದ ಫಾತಿಮಾ ಪ್ರೌಢಶಾಲೆಯಲ್ಲಿ ಕೊಠಡಿಗಳ ಕೊರತೆ ಹಿನ್ನೆಲೆಯಲ್ಲಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸ್ವಲ್ಪ ಮಕ್ಕಳಿಗೆ ಪರೀಕ್ಷೆ ನಡೆಸಲಾಯಿತು.

ಆರೋಗ್ಯ ಇಲಾಖೆ, ಸ್ಕೌಟ್ಸ್, ಸೇರಿದಂತೆ ಸಿಬ್ಬಂದಿಗಳು ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯೊಂದಿಗೆ ಕಡ್ಡಾಯವಾಗಿ ಕೋವಿಡ್ ನಿಯಮ ಉಲ್ಲಂಘನೆಯಾಗದAತೆ ಎಚ್ಚರಿಕೆ ವಹಿಸಿದರು. ಪರೀಕ್ಷಾ ಮುಖ್ಯ ಅಧೀಕ್ಷಕರುಗಳು ಪರೀಕೆÀ್ಷಗೆ ಎಲ್ಲಾ ರೀತಿಯ ಪೂರ್ವ ತಯಾರಿ ನಡೆಸಿದ್ದು, ಯಾವುದೇ ಅಡೆತಡೆ ಇಲ್ಲದೇ ವಿದ್ಯಾರ್ಥಿಗಳಿಗೆ ಅನುವುಮಾಡಿಕೊಟ್ಟರು.

ಕೊರೊನಾ ಸೋಂಕಿತ ವಿದ್ಯಾರ್ಥಿನಿಯೊಬ್ಬಳಿಗೆ ಸ್ಥಳೀಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಯಿತು.