ಗೋಣಿಕೊಪ್ಪಲು, ಜು. ೧೯: ನಾಗರಹೊಳೆ ರಾಷ್ಟಿçÃಯ ಉದ್ಯಾನದ ಆಸುಪಾಸಿನ ಜನವಸತಿ ಪ್ರದೇಶದಲ್ಲಿ ಕಂಡು ಬರುತ್ತಿದ್ದ ಹುಲಿಯ ಸಂಚಾರ ಇದೀಗ ನಗರ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಮೂಲಕ ನಾಗರಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸೋಮವಾರ ಮುಂಜಾನೆ ವೇಳೆ ಗೋಣಿಕೊಪ್ಪ ಸಮೀಪದ ಕೈಕೇರಿ ಗ್ರಾಮದ ಕುಪ್ಪಂಡ ಬೋಪಯ್ಯ ಅವರ ಕಾಫಿ ತೋಟದಲ್ಲಿ ಹುಲಿಯ ಸಂಚಾರಕ್ಕೆ ಪುಷ್ಟಿ ನೀಡುವಂತೆ ಹೆಜ್ಜೆ ಗುರುತುಗಳು ಕಂಡುಬAದಿವೆ.