ವಿಪಕ್ಷಗಳಿಂದ ಭಾರಿ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪ ಮುಂದೂಡಿಕೆ

ನವದೆಹಲಿ, ಜು. ೧೯: ಇಂದಿನಿAದ ಆರಂಭವಾದ ಸಂಸತ್‌ನ ಉಭಯ ಕಲಾಪಗಳನ್ನು ತಾ. ೨೦ಕ್ಕೆ ಮುಂದೂಡಿಕೆ ಮಾಡಲಾಗಿದೆ. ಮೊದಲ ದಿನ ಉಭಯ ಸದನಗಳ ಕಲಾಪ ಗದ್ದಲಕ್ಕೆ ಬಲಿಯಾಗಿದ್ದು, ಲೋಕಸಭೆಯಲ್ಲಿ ಪ್ರಧಾನಿ ನೂತನ ಸಚಿವರ ಪರಿಚಯಕ್ಕೆ ಮುಂದಾದಾಗ ವಿರೋಧ ಪಕ್ಷಗಳು ಗದ್ದಲ ಮಾಡಿದವು. ರಾಜ್ಯಸಭೆಯಲ್ಲೂ ಇದೇ ವಿಷಯ ಚರ್ಚಿತವಾಯಿತು. ಹೀಗಾಗಿ ರಾಜ್ಯಸಭೆ ಮತ್ತು ಲೋಕಸಭೆ ಕಲಾಪವನ್ನು ಮುಂದೂಡಲಾಗಿದೆ. ಕಲಾಪದಲ್ಲಿ ನೂತನ ಸಚಿವರ ಆಯ್ಕೆ ಕುರಿತು ಪ್ರಧಾನಿ ಮೋದಿ ಅವರು ಮಾತನಾಡಿದ ವೇಳೆ, ವಿರೋಧ ಪಕ್ಷಗಳು ಗದ್ದಲವೆಬ್ಬಿಸಿದವು. ದೇಶದ ಮಹಿಳೆಯರು, ಹಿಂದುಳಿದ ವರ್ಗದ ಹಾಗೂ ರೈತರ ಮಕ್ಕಳು ಸಚಿವರಾಗಿರುವುದು ಒಂದು ವೇಳೆ ಕೆಲವು ಜನರಿಗೆ ಅಸಮಾಧಾನವಾಗಿರಬಹುದು. ಆ ಕಾರಣದಿಂದಾಗಿಯೇ ಅವರ ಪರಿಚಯವನ್ನು ಮಾಡಲು ವಿಪಕ್ಷಗಳು ಅವಕಾಶ ನೀಡುತ್ತಿಲ್ಲ ಎಂದು ಪ್ರಧಾನಿ ತಿರುಗೇಟು ನೀಡಿದರು.ವಿಪಕ್ಷಗಳು ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಕಲಾಪದಲ್ಲಿ ಕೇಳಬಹುದಾಗಿದೆ. ಆದರೆ ಸದನದಲ್ಲಿ ಸರ್ಕಾರ ಉತ್ತರ ನೀಡಲು ವಿಪಕ್ಷಗಳು ಯಾವುದೇ ಗದ್ದಲಕ್ಕೆ ಅವಕಾಶ ನೀಡಬಾರದು ಎಂದು ಪ್ರಧಾನಿ ಮೋದಿ ಕಲಾಪ ಆರಂಭಕ್ಕೂ ಮುನ್ನ ಮನವಿ ಮಾಡಿಕೊಂಡಿದ್ದರು.

ಭೀಕರ ಅಪಘಾತ: ೩೦ ಮಂದಿ ಕಾರ್ಮಿಕರ ದುರ್ಮರಣ!

ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಡೇರಾ ಘಾಜಿ ಖಾನ್‌ನ ಸಿಂಧೂ ಹೆದ್ದಾರಿಯಲ್ಲಿ ಪ್ರಯಾಣಿಕರ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಟ ೩೦ ಜನರು ಸಾವನ್ನಪ್ಪಿದ್ದು, ಇತರ ೪೦ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ನತದೃಷ್ಟ ಬಸ್ ಸಿಯಾಲ್ ಕೋಟ್‌ನಿಂದ ರಾಜನ್ ಪುರಕ್ಕೆ ತೆರಳುತ್ತಿತ್ತು. ಅಪಘಾತ ಸ್ಥಳಕ್ಕೆ ತಕ್ಷಣವೇ ರಕ್ಷಣಾ ಸಿಬ್ಬಂದಿ ಧಾವಿಸಿ,ಗಾಯಾಳುಗಳನ್ನು ಡೇರಾ ಘಾಜಿ ಖಾನ್‌ನ ಡಿಎಚ್‌ಕ್ಯು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಡೇರಾ ಘಾಜಿ ಖಾನ್‌ನ ಆಯುಕ್ತ ಡಾ.ಇರ್ಷಾದ್ ಅಹ್ಮದ್ ತಿಳಿಸಿದ್ದಾರೆ. ಗಾಯಗೊಂಡ ನಾಲ್ವರ ಸ್ಥಿತಿ ಗಂಭೀರವಾಗಿದ್ದರಿAದ ಸಾವಿನ ಸಂಖ್ಯೆ ಮತ್ತಷÀÄ್ಟ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಆಡಳಿತ ತಿಳಿಸಿದೆ. ಘಟನೆಯಲ್ಲಿ ೩೦ ಮಂದಿ ಸಾವನ್ನಪ್ಪಿರುವುದನ್ನು ಪಾಕಿಸ್ತಾನ ಮಾಹಿತಿ ಮತ್ತು ಪ್ರಸಾರ ಸಚಿವ ಫವಾದ್ ಚೌಧರಿ ದೃಢಪಡಿಸಿದ್ದಾರೆ. ರಸ್ತೆ ಅಪಘಾತಗಳನ್ನು ತಪ್ಪಿಸಲು ಮತ್ತು ಜನರ ಜೀವ ಉಳಿಸಲು ಜನರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಮತ್ತು ಸಂಚಾರ ನಿಯಮಗಳನ್ನು ಪಾಲಿಸಬೇಕು ಎಂದು ಫವಾದ್ ಹೇಳಿದ್ದಾರೆ. ಘಟನೆಯ ಬಗ್ಗೆ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಉಸ್ಮಾನ್ ಬುಜ್ದಾರ್ ಮತ್ತು ಆಂತರಿಕ ಸಚಿವ ಶೇಖ್ ರಶೀದ್ ಸಹ ದುಃಖ ವ್ಯಕ್ತಪಡಿಸಿದ್ದಾರೆ.

ಬಕ್ರೀದ್ ಹಬ್ಬಕ್ಕೆ ಗೋವುಗಳ ಬಲಿ ಬೇಡ: ಸಚಿವ ಪ್ರಭು ಚವ್ಹಾಣ್

ಬೆಂಗಳೂರು ಜು ೧೯ : ತ್ಯಾಗ ಮತ್ತು ಬಲಿದಾನದ ಹಬ್ಬ ಎಂದೇ ಕರೆಯಲ್ಪಡುವ ಬಕ್ರೀದ್ ಹಬ್ಬದ ಸಮಯದಲ್ಲಿ ಸಹಜವಾಗಿಯೇ ಪ್ರಾಣಿಗಳ ಬಲಿ ನೀಡಲಾಗುತ್ತದೆ ಆದರೆ ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿದೆ. ರಾಜ್ಯದಿಂದ ಹೊರಗಡೆ ಅಥವಾ ಹೊರ ರಾಜ್ಯದಿಂದ ನಮ್ಮ ರಾಜ್ಯಕ್ಕೆ ಯಾವುದೇ ಮಾರ್ಗದಿಂದ ಅಕ್ರಮ ಗೋವುಗಳು ಮತ್ತು ಗೋಮಾಂಸ ಸಾಗಿಸುವುದರ ಮೇಲೆ ಇಲಾಖೆಯ ಅಧಿಕಾರಿಗಳು ಹದ್ದಿನ ಕಣ್ಣಿಡಲು ಸಚಿವ ಪ್ರಭು ಚೌಹಾಣ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಸಾಮಾನ್ಯವಾಗಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಬಲಿಕೊಡುವ ಸಂಪ್ರದಾಯವಿದ್ದು ಇದಕ್ಕಾಗಿ ಗೋವುಗಳನ್ನು ಸಹ ಬಳಕೆಮಾಡಲಾಗುತ್ತದೆ ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಗೋಹತ್ಯೆ ನಿಷೇಧ ಅನುಷ್ಠಾನ ಆಗಿರುವುದರಿಂದ ಗೋವುಗಳ ಹತ್ಯೆ ಯಾವುದೇ ಕಾರಣಕ್ಕೂ ನಡೆಯದಂತೆ ನೋಡಿಕೊಳ್ಳಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ. ರಾಜ್ಯದ ಎಲ್ಲ ಗಡಿಭಾಗಗಳಲ್ಲಿ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಲು ತಿಳಿಸಲಾಗಿದ್ದು ಗೋಹತ್ಯೆ ನಿಷೇಧ ಕಾಯ್ದೆಯ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ. ಒಂದು ವೇಳೆ ಎಲ್ಲಾದರೂ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವುದು ಕಂಡುಬAದಲ್ಲಿ ಗೋಪಾಲಕರು ಗೋರಕ್ಷಕರು ಹಾಗೂ ಸಾರ್ವಜನಿಕರು ಪಶುಸಂಗೋಪನೆ ಇಲಾಖೆಯ ಪ್ರಾಣಿ ಕಲ್ಯಾಣ ಸಹಾಯವಾಣಿಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಿ ಆದರೆ ಯಾವುದೇ ಕಾರಣಕ್ಕೂ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ.