ಮಡಿಕೇರಿ, ಜು. ೧೯: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ತಾ. ೨೦ ರಂದು (ಇಂದು) ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ‘ಕೊಡವ ಕಿರು ಸಿನಿಮಾ ಸ್ಪರ್ಧೆ’ಯನ್ನು ಏರ್ಪಡಿಸಲಾಗಿದೆ. ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ಅಧ್ಯಕ್ಷತೆಯಲ್ಲಿ ಸಿನಿಮಾ ಕಲಾವಿದ ನೆರವಂಡ ಉಮೇಶ್ ಮೊಣ್ಣಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡವ ಭಾಷಿಕ ಜನಾಂಗಕ್ಕೆ ಪರಿಕರ ವಿತರಣೆ ಕಾರ್ಯಕ್ರಮ ನಡೆಯಲಿದೆ.

ಅಕಾಡೆಮಿ ಪ್ರಕಟಿತ ಪುಸ್ತಕ ಮತ್ತು ಸಿ.ಡಿ.ಗಳ ಪ್ರದರ್ಶನವಿರುತ್ತದೆ ಎಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಡಾ. ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ತಿಳಿಸಿದ್ದಾರೆ.