ವೀರಾಜಪೇಟೆ : ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಕ್ಕೆ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಭೇಟಿ ನೀಡಿ ಎಲ್ಲಾ ಸಿದ್ಧತೆಗಳನ್ನು ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಶುಭ ಹಾರೈಸಿದರು.
ವೀರಾಜಪೇಟೆಯ ಸಂತಅನ್ನಮ್ಮ ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ ಸರಕಾರ ಕೋವಿಡ್ ಸಮಯದಲ್ಲಿ ಕೆಲವು ನಿಯಮಗಳನ್ನು ಅನುಸರಿಸಿ ಎರಡು ದಿನಗಳ ಪರೀಕ್ಷೆಯನ್ನು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಲ್ಲಿ ಆಯೋಜಿಸಿದೆ. ಮಕ್ಕಳು ಯಾವುದೇ ಅತಂಕ ಇಲ್ಲದೆ ಎಲ್ಲಾ ವಿಚಾರಗಳನ್ನು ಅರಿತು ಉತ್ತರಿಸಿ. ಪರೀಕ್ಷೆಯನ್ನು ಎಲ್ಲಾ ರೀತಿಯಲ್ಲಿ ಸೂಕ್ತವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಬಿಸ್ಕೆಟ್ ವಿತರಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಈ ಬಗ್ಗೆ ಮಾತನಾಡಿ, ೨೧೬೨ ವಿದ್ಯಾರ್ಥಿಗಳ ಪೈಕಿ ೧೬ ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಸಂತ ಅನ್ನಮ್ಮ ದೇವಾಲಯದ ಧರ್ಮಗುರುಗಳಾದ ಮದುಲೈ ಮುತ್ತು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಶಿ ಸುಬ್ರಮಣಿ, ಮೆನ್ಸ್ಮ್ಯಾನ್ ಸಂಸ್ಥೆಯ ಪದಾಧಿಕಾರಿಗಳು, ಬಿಜೆಪಿ ಮುಖಂಡರಾದ ಚುಪ್ಪಾ ನಾಗರಾಜ್ ಬಿಜೆಪಿ ಪ್ರಮುಖ ಜೋಕಿಂ, ಮತ್ತಿತರರು ಉಪಸ್ಥಿತರಿದ್ದರು.