ಕುಶಾಲನಗರ, ಜು. ೧೯: ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ೪.೨೫ ಕೆಜಿ ತೂಕದ ಮಗುವಿಗೆ ಜನ್ಮ ನೀಡಿದ್ದಾರೆ. ಪಟ್ಟಣದ ಟೌನ್ ಕಾಲನಿಯ ಮಹಿಳೆ ರಮ್ಯಶ್ರೀ ಎಂಬವರು ೪.೨೫ ಕೆಜಿ ತೂಕದ ಮಗುವಿಗೆ ಜನ್ಮ ನೀಡಿದ್ದು ಆರೋಗ್ಯವಂತರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಸರ್ಕಾರಿ ಆಸ್ಪತ್ರೆಯ ಪ್ರಸೂತಿ ತಜ್ಞೆ

ಡಾ. ಪ್ರತಿಭಾ ಮತ್ತು ಶುಶ್ರೂಷಕಿಯರು ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಗೆ ಸುಸೂತ್ರವಾಗಿ ಹೆರಿಗೆ ಮಾಡಿಸುವಲ್ಲಿ ಯಶಸ್ಸು ಕಂಡಿದ್ದಾರೆ.