ಮಡಿಕೇರಿ, ಜು. ೧೯: ಜಿಲ್ಲೆಯಲ್ಲಿ ಸೋಮವಾರ ೬ ಹೊಸ ಕೋವಿಡ್-೧೯ ಪ್ರಕರಣಗಳು. ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿವೆ. ‘ಆರ್‌ಟಿಪಿಸಿಆರ್’ ಲ್ಯಾಬ್ ಸ್ಯಾನಿಟೈಸೇಶನ್ ಸಂಬAಧ ತಾ. ೧೮ ರಂದು ಮುಚ್ಚಲ್ಪಟ್ಟಿತ್ತು. ಮಡಿಕೇರಿ ತಾಲೂಕಿನಲ್ಲಿ ೨, ಸೋಮವಾರಪೇಟೆ ತಾಲೂಕಿನಲ್ಲಿ ೧, ವೀರಾಜಪೇಟೆ ತಾಲೂಕಿನಲ್ಲಿ ೩ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆ.

ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೦,೯೭೬ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೭೮ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೦,೨೭೨ ಮಂದಿ ಗುಣಮುಖರಾಗಿದ್ದಾರೆ. ೩೧೭ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೦೨ ಸಾವು ಉಂಟಾಗಿದ್ದು, ಒಟ್ಟು ೩೮೭ ಮರಣ ಪ್ರಕರಣಗಳು ವರದಿಯಾಗಿವೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ ೯೬ ಆಗಿವೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೨.೦೫ ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.